ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ಕಳೆದ ಐದು ಆರು ದಿನಗಳಿಂದ ಸೋನೆ ಮಳೆ ಧಾರಾಕಾರವಾಗಿ ಬೀಳುತ್ತಿರುವುದರಿಂದ ಹಿನ್ನೆಲೆಯಲ್ಲಿ ಬೀದರ್ ತಾಲ್ಲೂಕಿನ ಪಾತ್ರಪಲ್ಲಿ ಗ್ರಾಮದ ರೈತರ ಹೊಲದಲ್ಲಿನ ಸೋಯಾ ಬೆಳೆ ಸಂಪೂರ್ಣ ಜಲಾವೃತವಾಗಿದೆ.
ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭೇಟಿ ಪರಿಶೀಲನೆ ನಡೆಸಿದರು.
ಮಳೆ ಹಾನಿಗೆ ಒಳಗಾದ ಬೀದರ್ ದಕ್ಷಿಣ ಕ್ಷೇತ್ರದ ರಸ್ತೆ, ಚರಂಡಿ, ಸೇತುವೆ ಮತ್ತು ಮನೆಗಳಿಗೆ ಭೇಟಿ ನೀಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಪರಿಶೀಲನೆ ನಡೆಸಿದರು. ಬೀದರ್ ದಕ್ಷಿಣ ಕ್ಷೇತ್ರದ ತಡಪಳ್ಳಿ ಗ್ರಾಮ ಹಾಗೂ ಸಿಂದೋಲ ಭಂಗೂರ ಸಂಪರ್ಕ ಸೇತುವೆ ವೀಕ್ಷಣೆ ಮಾಡಿ ಅದನ್ನು ಮೇಲ್ದರ್ಜೆಗೆ ಏರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಎಡೆಬಿಡದೆ ಸುರಿದ ಮಳೆಯಿಂದಾಗಿ ತಗ್ಗುಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ, ಸಾಕಷ್ಟು ನಷ್ಟ ಸಂಭವಿಸಿದೆ. ಈ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡದರು.
ಶಾಸಕರ ಜೊತೆ ಕಾರ್ಯ ನಿರ್ವಾಹಕ ಇಂಜಿನೀಯರ್ ಭಗವಾನ ಸಿಂಗ್, ಪಿಡಿಒ ಸುನೀತಾ, ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.