ಪಂಚಾಯತ ರಾಜ್ ಯೋಜನೆಗಳ ಸದುಪಯೋಗಪಡಿಸಿಕೊಳ್ಳಲು ಹೆಗ್ಗನಾಯಕ ಕರೆ

Must Read

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ...

ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್‍ಡಿ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಲ್ಲಪ್ಪ ಕೆಂಚಪ್ಪ ಕಂಕಣವಾಡಿ ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಡಾ: ಹೆಚ್.ಎಸ್.ಜಂಗೆ ಅವರ...

ಪೋಸ್ಟ್ ಕಾರ್ಡಗಳಲ್ಲಿ ಪ್ರಧಾನಿಗೆ ಶುಭಾಶಯ

ಸಿಂದಗಿ: ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲ ವತಿಯಿಂದ ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ವಿಶ್ವ ನಾಯಕ ನಮ್ಮ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ಮೋದೀಜಿ...

ಮೂಡಲಗಿ: ಭಾರತ ದೇಶವು ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳ ಅಭಿವೃದ್ಧಿಗಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆಯಿಂದ ಸಾಕಷ್ಟು ಯೋಜನೆಗಳಿವೆ. ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ ಸಿಬ್ಬಂದಿಯವರು ಇವುಗಳ ಉಪಯೋಗ ಪಡೆದುಕೊಂಡಾಗ ಮಾತ್ರ ಹಳ್ಳಿಗಳ ಅಭಿವೃದ್ಧಿಯಾಗಿ ಗಾಂಧೀಜಿಯವರ ಕನಸು ನನಸಾಗಲು ಸಾಧ್ಯವಾಗುವದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸಮೀಪದ ಹಳ್ಳೂರ ಗ್ರಾಮ ಪಂಚಾಯತ ಹಾಗೂ ಎಸ್ ಆರ್ ಸಂತಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಯಾನವನ ವೀಕ್ಷಿಸಿ, ನರೇಗಾ ಯೋಜನೆಯಡಿ 6 ಲಕ್ಷ ರೂ.ಗಳ ಉದ್ಯಾನವನದಲ್ಲಿ ವಿದ್ಯಾರ್ಥಿಗಳು ಕುಳಿತುಕೊಂಡು ಅಭ್ಯಾಸ ಹಾಗೂ ವಿಶ್ರಾಂತಿ ಮಾಡಲು ಹಸಿರು ಗ್ರಂಥಾಲಯ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು. ತಾಲೂಕು ಪಂಚಾಯತ್ 15 ನೇ ಹಣಕಾಸು ಯೋಜನೆಯಡಿ ವಿದ್ಯಾರ್ಥಿಗಳಿಗೆ ಸೈಕಲ್ ಸ್ಟ್ಯಾಂಡ್ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಕೈಗೊಳ್ಳಬೇಕು. ಪ್ರತಿ ವಾರ್ಡ್‍ಗಳಲ್ಲಿಯೂ ಹಸಿರು ವನ, ಸ್ವಚ್ಚತೆ, ನರೇಗ ಯೋಜನೆಯಡಿ ಹಾಗೂ ಇನ್ನಿತರ ಯೋಜನೆಯಡಿ ಬರುವಂತಹ ಸಾರ್ವಜನಿಕ ಉಪಯುಕ್ತ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಸಾಕಷ್ಟು ಯೋಜನೆಗಳನ್ನು ಹಲವಾರು ಕ್ಷೇತ್ರಗಳಿಗೆ ಸಿಗುವಂತೆ ಮಾಡಿದ್ದಾರೆ. ಅನೇಕ ಇಲಾಖೆಗಳಿಗೆ ಸರಕಾರದ ಅನುದಾನದ ಜೊತೆ ತಮ್ಮ ಸ್ವಂತ ಅನುದಾನವನ್ನು ವ್ಯಯಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಮೂಡಲಗಿಯಲ್ಲಿಯೇ ನೂತನ ತಾಲೂಕು ಕಛೇರಿ ಕೆಲಸ ಪ್ರಾರಂಭಗೊಳಿಸಿದೆ.

- Advertisement -

ಇದರ ಸದುಪಯೋಗವನ್ನು ರೈತಾಪಿ ಜನರು, ಕೃಷಿ ಕೂಲಿ ಕಾರ್ಮಿಕರು, ನಿರ್ಗತಿಕರಿಗೆ ದೊರೆಯುವಂತೆ ಮಾಡಬೇಕು. ಗ್ರಾಮಗಳ ಸಮಗ್ರ ಅಭಿವೃದ್ಧಿಯಾದಾಗ ಮಾತ್ರ ದೇಶ ಅಬಿವೃದ್ಧಿಯಾಗುವದು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳೆ ಭವಿಷ್ಯತ್ತಿನ ಆಶಾ ಕುಸುಮಗಳು ಅವರು ಭೌತಿಕವಾಗಿ, ಜ್ಞಾನರ್ಜನೆ, ಸಾಂಸ್ಕೃತಿಕವಾಗಿ ಉನ್ನತ ಆಚಾರ ವಿಚಾರಗಳನ್ನು ಅವರಿಗೆ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನವರ, ಪಿಡಿಒ ಹನಮಂತ ತಾಳಿಕೋಟಿ, ಪ್ರಾಚಾರ್ಯ ಎಸ್.ಎಸ್. ಬೆಕ್ಕೇರಿ, ಉಪನ್ಯಾಸಕ ವಾಯ್.ಬಿ ಕಳ್ಳಿಗುದ್ದಿ, ಮಹಾಂತೇಶ ಸಂತಿ ಹಾಗೂ ಪಂಚಾಯತ ಸಿಬ್ಬಂದಿ ಹಾಜರಿದ್ದರು.

- Advertisement -
- Advertisement -

Latest News

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ...
- Advertisement -

More Articles Like This

- Advertisement -
close
error: Content is protected !!