ಡಾ. ಹೇಮಂತ ಕುಮಾರ್. ಬಿ, ಕನ್ನಡ ಭವನದ ಹಾಸನ ಜಿಲ್ಲಾಧ್ಯಕ್ಷರಾಗಿ ಆಯ್ಕೆ

Must Read

ಕಾಸರಗೋಡು : ಸಂಘಟಕ, ಲೇಖಕ ಬಹುಮುಖ ಪ್ರತಿಭೆ ಡಾ ಹೇಮಂತ ಕುಮಾರ್. ಬಿ. ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ, ಕರ್ನಾಟಕ ರಾಜ್ಯ ಹಾಸನ ಜಿಲ್ಲೆಯ ಕನ್ನಡ ಭವನ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಕಾಸರಗೋಡು ಕನ್ನಡ ಭವನದ. ರಜತ ಸಂಭ್ರಮ ವರ್ಷವಾದ 2025 ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.

ಕಾಸರಗೋಡು ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮನಿರ್ದೇಶನ ಮಾಡಿದರು. ಕನ್ನಡ ಭವನ ನಿರ್ದೇಶಕರಾದ ಡಾ. ಕೊಲಚಪ್ಪೆ ಗೋವಿಂದ ಭಟ್ ಅನುಮೋದಿಸಿದರು. ಸರ್ವಾನುಮತದಿಂದ ಆಯ್ಕೆಯಾದ ಡಾ. ಹೇಮಂತ್ ಚಿನ್ನು ಅವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಾಯ, ಕಾಸರಗೋಡು ಪ್ರದೇಶಕ್ಕೆ ಕರ್ನಾಟಕ ದಿಂದ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿಗಳಿಗೆ “ಉಚಿತ ವಸತಿ ಸೌಕರ್ಯ “ಹಾಗೂ ಕನ್ನಡ ಭವನ ರಜತ ಸಂಭ್ರಮ ವಿಶೇಷ ಕಾರ್ಯಕ್ರಮ ಸಂಘಟನೆ, “ಮನೆಗೊಂದು ಗ್ರಂಥಾಲಯ – ಪುಸ್ತಕವೇ ಸತ್ಯ ಪುಸ್ತಕವೇ ನಿತ್ಯ “ಕಾರ್ಯಕ್ರಮ ಗಳ ಜವಾಬ್ದಾರಿ ಸ್ವೀಕರಿಸಿ, ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವ್ರಿತ್ತರಾಗಬೇಕೆಂದು ಕಾಸರಗೋಡು ಕನ್ನಡ ಭವನದಲ್ಲಿ ಸ್ಥಾಪಕ ಅಧ್ಯಕ್ಷರಾದ ವಾಮನ್ ರಾವ್ ಬೇಕಲ್ ಮತ್ತು ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವಿಗೋಷ್ಠಿಗೆ ಆಹ್ವಾನ

ಮೂಡಲಗಿ - ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು,...

More Articles Like This

error: Content is protected !!
Join WhatsApp Group