ದಿ.31 ರಂದು ಕಲ್ಲೊಳ್ಳಿಯಲ್ಲಿ ಹಿಂದೂ ಸಮಾಜೋತ್ಸವ

Must Read

ಮೂಡಲಗಿ: ಹಿಂದೂ ಸಮ್ಮೇಳನ ಸಂಚಾಲನ ಸಮಿತಿ, ಕಲ್ಲೋಳಿ ವತಿಯಿಂದ ಜನವರಿ 31 ಶನಿವಾರರಂದು ಸಂಜೆ 04.00 ಗಂಟೆಗೆ ಕಲ್ಲೋಳಿ ಪಟ್ಟಣದ ಬಲಭೀಮ ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಮಾವೇಶದ ಅಂಗವಾಗಿ ಮಧ್ಯಾಹ್ನ 03.00 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಿಂದ ಬಲಭೀಮ ರಂಗ ಮಂದಿರದವರೆಗೆ ಡೊಳ್ಳು ಕುಣಿತ, ಕರಡಿ ಮಜಲು, ಝಾಂಜ್ ಪಥಾಕ್, ಮಹಿಳೆಯರಿಂದ ಬೃಹತ್ ಕುಂಭ ಮೇಳ, ಭಾರತ ಮಾತೆಯ ಭಾವಚಿತ್ರ ಸಹಿತವಾಗಿ ಬೃಹತ್ ಶೋಭಾ ಯಾತ್ರೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ನಂತರ ವೇದಿಕೆ ಕಾರ್ಯಕ್ರಮವು ಸಂಜೆ 04.00 ಗಂಟೆಗೆ ಪ್ರಾರಂಭವಾಗಲಿದ್ದು. ಹುಕ್ಕೇರಿ ಕ್ಯಾರಗುಡ್ಡ ಮಠದ ಪೂಜ್ಯ ಶ್ರೀ ಅಭಿನವ ಮಂಜುನಾಥ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ.

ಸುರೇಶ ನಿಂಗಪ್ಪನವರ, ವೈಭವಿ ಕುಲಕರ್ಣಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವ ಸಮಸ್ತ ಹಿಂದೂ ಭಾಂಧವರಿಗಾಗಿ ಮಹಾಪ್ರಸಾದ ವ್ಯವಸ್ಥೆಯನ್ನು ಸಂಘಟಕರು ಆಯೋಜಿಸಿದ್ದಾರೆ. ಕಲ್ಲೋಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಹಿಂದೂ ಕಾರ್ಯಕರ್ತರು ಹಾಗೂ ದೇಶಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಂದು ಸಂಘಟಕರು ವಿನಂತಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group