ಧರ್ಮಸ್ಥಳ ಪ್ರಕರಣ ; ಮುಖ್ಯಮಂತ್ರಿ, ಗೃಹಮಂತ್ರಿ ರಾಜ್ಯದ ಕ್ಷಮೆ ಕೇಳಬೇಕು

Must Read

ಸಿಂದಗಿ; ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಕಛೇರಿಯವರೆಗೆ ಪಾದಯಾತ್ರೆ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಸಂಸದ ರಮೇಶ ಜಿಗಜೀಣಗಿ, ಮಾಜಿ ಶಾಸಕ ರಮೇಶ ಭೂಸನೂರ, ಸುರೇಶ ಬಿರಾದಾರ, ಮಾಳುಗೌಡ ಪಾಟೀಲ, ರಮೇಶ ಮಸಬಿನಾಳ, ಮಂಡಲ ಅದ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿರುವ ಶ್ರೀ ಧರ್ಮಸ್ಥಳ ಕ್ಷೇತ್ರ ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ಧೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದರ ಹಿಂದೆ ಹಿಂದೂಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ‍್ಯವು ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳೆಲ್ಲೆಲ್ಲಾ ಗುಂಡಿಗಳನ್ನು ತೋಡಿದೆ. ಆದರೆ, ಈ ಅನಾಮಿಕನ ಹಿಂದಿರುವ ದುಷ್ಟ ವ್ಯಕ್ತಿಗಳು ಯಾರು ಮತ್ತು ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಈವರೆಗೂ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ತಿಳಿಸಿರುವುದಿಲ್ಲ. ಆದುದರಿಂದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂತಹ ದುಷ್À್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದರು.

ಈ ವೇಳೆ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಶ್ರೀಶೈಲಗೌಡ ಬಿರಾದಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ನೀಲಮ್ಮ ಯಡ್ರಾಮಿ, ಎಂ.ಎಸ್.ಮಠ, ಸಿದ್ದು ಬುಳ್ಳಾ, ಪ್ರಶಾಂತ ಕದ್ದರಕಿ, ಬಿ.ಎಚ್.ಬಿರಾದಾರ, ಪಿರು ಕೆರೂರ, ಗುರು ತಳವಾರ, ಸಿದ್ರಾಮ ಆನಗೊಂಡ, ವಿಠಲ್ ನಾಯ್ಕೋಡಿ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಪ್ರಕಾಶ ಹಿರೇಕುರಬರ, ಬಸವರಾಜ ಐರೋಡಗಿ ಸೇರಿದಂತೆ ಅನೇಕರು ಇದ್ದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group