ಹಿರೇಮಳಗಾವಿಯ ಮುಖ್ಯ ಗುರುಮಾತೆ ದೇವದುರ್ಗ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಪ್ರಶಸ್ತಿ

Must Read

ಹುನಗುಂದ – ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್  ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಬಾಗಲಕೋಟ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಹುನಗುಂದ ತಾಲೂಕಿನ ಹಿರೇಮಳಗಾವಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾಗಿರುವ ಶ್ರೀಮತಿ ಬಿ.ಬಿ ದೇವದುರ್ಗ ಗುರುಮಾತೆಯರಿಗೆ 2025 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಲಾಯಿತು..

ಬಾಗಲಕೋಟೆಯ ಕಲಾಭವನದಲ್ಲಿ ಸೆಪ್ಟಂಬರ್ 5ರಂದು ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ಸಂಸದರು ಪಿ ಸಿ ಗದ್ದಿಗೌಡರ, ಬಾಗಲಕೋಟೆಯ ಶಾಸಕ ಎಚ್ ವೈ ಮೇಟಿ ಹಾಗೂ ಬಾಗಲಕೋಟೆಯ ಜಿಲ್ಲಾಧಿಕಾರಿ ಸಂಗಪ್ಪ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್ ಕುರೇರ ಹಾಗೂ ಜಿಲ್ಲಾ ಉಪ ನಿರ್ದೇಶಕರು ಆಗಿರುವ ಎ ಸಿ ಮಣ್ಣಿಕೇರಿ ಮತ್ತು ಹುನಗುಂದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಗಿರುವ ಶ್ರೀಮತಿ ಜಾಸ್ಮಿನ್ ಕಿಲ್ಲೆದಾರ ಹಾಗೂ ಇನ್ನಿತರ ಗಣ್ಯ ಮಾನ್ಯರು ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶ್ರೀಮತಿ ಬಿ ಬಿ ದೇವದುರ್ಗ ಇವರಿಗೆ ಸಮಸ್ತ ಹುನಗುಂದ ತಾಲೂಕಿನ ಶಿಕ್ಷಕ ಬಳಗ ಹಾಗೂ ಹಿರೇಮಳಗಾವಿ ಗ್ರಾಮದ ಗುರು ಹಿರಿಯರು ಮತ್ತು ಶಾಲೆಯ ಶಿಕ್ಷಕ ಬಳಗ ಹಾಗೂ ಪ್ರೀತಿಯ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group