spot_img
spot_img

ಹೋಳಿ ಹಬ್ಬ ಆಚರಣೆ ಮಹತ್ವ ಮತ್ತು ಹಿನ್ನೆಲೆ

Must Read

- Advertisement -

ಪಾಲ್ಗುಣ ಮಾಸದ ಶುದ್ಧ ಹುಣ್ಣಿಮೆ ಅಂದರೆ ಚಾಂದ್ರಮಾನ ಪಂಚಾಂಗದ ಪ್ರಕಾರ ವರ್ಷದ ಕೊನೆಯ ಹುಣ್ಣಿಮೆ. ಇದನ್ನು ಹೋಳಿ ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಈ ಹಬ್ಬವು ವಸಂತ ಮಾಸವನ್ನು ಸ್ವಾಗತಿಸುವುದಷ್ಟೇ ಅಲ್ಲ ಏಕತೆಯನ್ನು ಬಿಂಬಿಸಿ ಹೊಸದನ್ನು ಸ್ವಾಗತಿಸುವ ಹಬ್ಬ. ಬಣ್ಣಗಳನ್ನು ಎರಚಾಡಿ ಸಂಭ್ರಮಿಸುವುದಕ್ಕಷ್ಟೇ ಈ ಹಬ್ಬವು ಸೀಮಿತವಾಗಿಲ್ಲ. ಬಡವ-ಬಲ್ಲಿದ, ಜಾತಿ ಧರ್ಮದ ಎಲ್ಲೆಯನ್ನು ಮೀರಿ ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬ ತಾತ್ವಿಕ ನಿಲುವನ್ನು ಅಕ್ಷರಶಃ ಆಚರಣೆಗೆ ತರುವುದೇ ಈ ಹೋಳಿ ಹುಣ್ಣಿಮೆ.

ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. 

ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ವಸಂತ ಮಾಸದಲ್ಲಿ ಆಚರಿಸಲಾಗುತ್ತದೆ. ಚಳಿಗಾಲದ ಕೊನೆಯನ್ನು ವಸಂತದ ಆಗಮನವನ್ನು ಸಾರುವ ಹಬ್ಬವಾಗಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ.

- Advertisement -

ಹೋಳಿ ಹಬ್ಬವನ್ನು ದಿನದಂದು ಮಕ್ಕಳಿಂದ ದೊಡ್ಡವರ ತನಕ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ಆ ದಿನ ಕಾಮನ ಸುಂದರ ಪ್ರತಿಮೆ ಮಾಡಿ ಶೃಂಗರಿಸಿ ಊರಿನ ಕಾಮನ ಕಟ್ಟೆಯ ಮೇಲೆ ಚಪ್ಪರ ಕಟ್ಟಿ ಇಡುತ್ತಾರೆ. ಕಾಮನ ಮುಂದೆ ಮಂಗಳ ವಾದ್ಯಗಳನ್ನು ಊದುತ್ತಾರೆ ಅದಲ್ಲದೆ ಪರಸ್ಪರ ಬೈಗುಳ, ಬಣ್ಣದ ನೀರು, ಸಗಣಿಯ ಗಂಜಲಗಳನ್ನು ಎರಚುತ್ತಾರೆ.

ಹೋಳಿಯ ಇತಿಹಾಸ:

ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದನು. ಆತ ದುರಹಂಕಾರಿಯೂ ಹಾಗೂ ಕ್ರೂರಿಯೂ ಆಗಿದ್ದನು. ತಾರಕಾಸುರ ತನಗೆ ಸಾವು ಬರದಿರಲಿ ಎಂದು ತಪಸ್ಸು ಮಾಡಿದ್ದನು. ಆಗ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ. ಆಗ ನನಗೆ ಮರಣ ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಎಂಬ ವರವನ್ನು ಕೇಳಿದ್ದನು. ತಾರಕಾಸುರನ ತಪಸ್ಸನ್ನು ಮೆಚ್ಚಿ ಬ್ರಹ್ಮ ವರವನ್ನು ಕೊಡುತ್ತಾನೆ. ಆಗ ತನಗೆ ವರ ಸಿಕ್ಕಿದೆ ಎಂದು ತಾರಕಾಸುರ ಮೆರೆಯುತ್ತಿರುತ್ತಾನೆ. ಇತ್ತ ಭೋಗ ಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾಧ್ಯವಿರಲಿಲ್ಲ. ಆಗ ದೇವತೆಗಳು ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು. ಕಾಮ ಅಂದರೆ  ಮನ್ಮಥ ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದ್ದರು. ಈ ವೇಳೆ ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದುಃಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು “ಕಾಮನ ಹುಣ್ಣಿಮೆ”ಯಾಗಿ ಆಚರಿಸಲ್ಪಡುತ್ತದೆ.

ಮತ್ತೊಂದು ಕಥೆ:

ಹಿರಣ್ಯಕಶಿಪುವಿನ ಸಹೋದರಿ ಹೋಲಿಕಾ ಇದ್ದಳು. ಹಿರಣ್ಯಕಶಿಪು ತನ್ನ ರಾಜ್ಯದಲ್ಲಿ ದೇವರನ್ನು ಪೂಜಿಸುವುದನ್ನು ನಿಷೇಧಿಸಿದ್ದು, ತನ್ನನ್ನೇ ದೇವರೆಂದು ಪೂಜಿಸುವಂತೆ ಆದೇಶಿಸಿದ್ದನು. ಆದರೆ ಆತನ ಮಗ ಪ್ರಹ್ಲಾದ ವಿಷ್ಣು ದೇವರ ಪರಮ ಭಕ್ತನಾಗಿದ್ದನು. ತಾನು ಎಷ್ಟೆ ಪ್ರಯತ್ನ ಮಾಡಿದರು ಮಗನಿಂದ ವಿಷ್ಣು ದೇವರ ಆರಾಧಾನೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. ಕೊನೆಗೆ ಹಿರಣ್ಯಕಶಿಪು ತನ್ನ ಮಗನನ್ನು ದಂಡಿಸಲು ತೀರ್ಮಾನಿಸುತ್ತಾನೆ. ಆಗ ಬೆಂಕಿಯು ಸುಡದಂತೆ ವರವನ್ನು ಪಡೆದಿದ್ದ ತನ್ನ ತಂಗಿ ಹೋಲಿಕಾಳ ಸಹಾಯವನ್ನು ಹಿರಣ್ಯಕಶಿಪು ಪಡೆಯುತ್ತಾನೆ. ಹಿರಣ್ಯಕಶಿಪು ತನ್ನ ಮಗನನ್ನು ಆಕೆಯ ತೊಡೆಯ ಮೇಲೆ ಕೂರಿಸಿಕೊಳ್ಳುವಂತೆ ತಂಗಿಯಲ್ಲಿ ಕೇಳಿದನು. ಹೋಲಿಕಾ ಅಣ್ಣನ ಆಜ್ಞೆಯಂತೆ ಪ್ರಹ್ಲಾದನನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಳ್ಳುತ್ತಾಳೆ. ಆದರೆ ಈ ಪಾಪಕೃತ್ಯವನ್ನು ಹೋಲಿಕಾ ಮಾಡಿದ್ದರಿಂದಾಗಿ, ಆಕೆಯ ವರ ನಿಷ್ಫಲವಾಗುತ್ತದೆ. ಇದರಿಂದ ಹೋಲಿಕಾ ಸುಟ್ಟು ಬೂದಿಯಾಗುತ್ತಾಳೆ. ಪ್ರಹ್ಲಾದ ಸುರಕ್ಷಿತವಾಗಿ ಬೆಂಕಿಯಿಂದ ಹೊರಬರುತ್ತಾನೆ. ಅದಕ್ಕಾಗಿ ಪ್ರತೀ ವರ್ಷ ಹೋಲಿಯ ಮುನ್ನ ಹಿಂದೂ ಮನೆಗಳಲ್ಲಿ ಹೋಲಿಕಳನ್ನು ಸುಡುತ್ತಾರೆ.

- Advertisement -

ಈ ಹಬ್ಬ ಮನೆಯ ಪ್ರತಿಯೊಬ್ಬ ಸದಸ್ಯರನ್ನು ಒಂದುಗೂಡಿಸುತ್ತದೆ ಮತ್ತು ಹಬ್ಬದ ಸಡಗರವನ್ನು ಪ್ರತಿಯೊಬ್ಬರಲ್ಲಿ ತುಂಬುತ್ತದೆ. ಕೆಟ್ಟದ್ದು ಒಳ್ಳೆಯದರ ಮುಂದೆ ತಲೆಬಾಗಲೇಬೇಕು ಎಂಬ ಸಂದೇಶವನ್ನು ಹೋಳಿ ಹಬ್ಬ ಸಾರುತ್ತದೆ. ದುಷ್ಕ್ರತ್ಯಗಳು ದೇವರ ಶಕ್ತಿಯ ಎದುರು ಎಂದಿಗೂ ಜಯವನ್ನು ಪಡೆಯಲು ಸಾಧ್ಯವಿಲ್ಲ ಎಂಬ ಸಾರ ಈ ಹಬ್ಬದ ಹಿಂದಿದೆ. ಹೋಲಿಕಳಂತೆ ಕೆಟ್ಟ ಶಕ್ತಿಗಳು, ದುಷ್ಟ ಆಲೋಚನೆಗಳು ನಾಶವಾಗಿ ಹೊಸದರ ಪ್ರಾರಂಭದ ಕಡೆಗೆ ಮನುಷ್ಯರು ಹೋಗುತ್ತಾರೆ.

ನಮ್ಮ ದೇಶದಲ್ಲಿ ವಿವಿಧ ರೀತಿಯ ಹಬ್ಬಗಳನ್ನು ಹೇಗೆ ಆಚರಿಸಲಾಗುತ್ತದೆ, ಇದಕ್ಕಾಗಿ ಪ್ರವಾಸಿಗರು ಸಹ ವಿನೋದವನ್ನು ನೋಡಲು ಬರುತ್ತಾರೆ. ಹೋಳಿ ಬಣ್ಣಗಳ ಹಬ್ಬವಾಗಿದೆ, ಇದು ಜೀವನದಲ್ಲಿ ಬಣ್ಣಗಳ ಮಹತ್ವವನ್ನು ಹೇಳುತ್ತದೆ. ಹೋಳಿಯ ಹಬ್ಬವು ಕೆಟ್ಟದ್ದರ ಮೇಲೆ ಒಳ್ಳೆಯದನ್ನು ಗೆದ್ದ ಆಚರಣೆಯಾಗಿದೆ. ಆಚರಣೆಗಳನ್ನು ಅನೇಕ ವಿಧಗಳಲ್ಲಿ ಆಚರಿಸಲಾಗುತ್ತದೆ. ಅಂತೆಯೇ, ಹೋಳಿ ಬಣ್ಣಗಳು ಮತ್ತು ಹೂವುಗಳೊಂದಿಗೆ ಆಚರಿಸುವ ವಿಧಾನವನ್ನು ಹೊಂದಿದೆ. ಹೋಳಿ ಭಾರತದಲ್ಲಿ ಆಚರಿಸುವ ದೊಡ್ಡ ಹಬ್ಬಗಳಲ್ಲಿ ಒಂದಾಗಿದೆ.


ಲಕ್ಕಮ್ಮನವರ

- Advertisement -
- Advertisement -

Latest News

ಸರ್ವರಿಗೂ ಸಮಬಾಳು, ಸಮಪಾಲು ನೀಡುವುದು ಕಾಂಗ್ರೆಸ್ – ಲಕ್ಷ್ಮಿ ಹೆಬ್ಬಾಳಕರ

ಮೂಡಲಗಿ - ನಮ್ಮ ಪಕ್ಷವು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಡಿ ಕೆಲಸ ಮಾಡುತ್ತದೆ. ನಾವು ಐದೂ ಗ್ಯಾರಂಟಿಗಳನ್ನು ನೆರವೇರಿಸಿದ್ದೇವೆ. ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group