ಅಭಿವೃದ್ಧಿ ಹಾಗೂ ಸಮರ್ಥ ನಾಯಕತ್ವಕ್ಕೆ ಮಣೆ – ಈರಣ್ಣ ಕಡಾಡಿ

Must Read

ಮೂಡಲಗಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಚುನಾವಣೆಯಲ್ಲಿ ಮತದಾರರು ಅಭಿವೃದ್ಧಿ ಹಾಗೂ ಸಮರ್ಥ ನಾಯಕತ್ವಕ್ಕೆ ಮಣೆ ಹಾಕಿ ಗೆಲುವಿನ ಮಾಲೆಯನ್ನು ಬಿಜೆಪಿ ಕೊರಳಿಗೆ ಹಾಕಿದ್ದಾರೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

ದೇಶದ ಜನರು ಸುಳ್ಳು ಗ್ಯಾರಂಟಿಗಳು ಹಾಗೂ ದೇಶ ವಿರೋಧಿ ಮೈತ್ರಿಕೂಟವನ್ನು ತಿರಸ್ಕರಿಸಿದ್ದಾರೆ ಎಂಬುದರ ಸ್ಪಷ್ಟ ನಿದರ್ಶನ ಈ ಚುನಾವಣೆಯಿಂದ ಸ್ಪಷ್ಟವಾಗಿದೆ. ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿರುವುದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ನೇತೃತ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವನ್ನು ದಾಖಲಿಸಿ ಮಗದೊಮ್ಮೆ ದೇಶದ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಅವರು ಮೂರು ರಾಜ್ಯಗಳ ವಿಧಾನ ಸಭಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪ್ರಕಟಣೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group