ಸಿಂದಗಿ: ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು ಇದು ಅಷ್ಟೇ ಸತ್ಯವೂ ಕೂಡ ಎಂದು ವೈದ್ಯ ವಿದ್ಯಾ ಬಡಿಗೇರ ಹೇಳಿದರು
ಪಟ್ಟಣದ ಲಿಟಲ್ ವಿಂಗ್ಸ್ ಪ್ರಿಸ್ಕೂಲ್ ನಲ್ಲಿ ಹಮ್ಮಿಕೊಂಡ ವಿಶ್ವ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ, ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ. ವೈದ್ಯೋ ನಾರಾಯಣ ಹರಿಃ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನ ದೇವರಿಗೆ ಹೋಲಿಸಲಾಗುತ್ತದೆ. ಈ ಪದ್ಧತಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದರು.
ಅತಿಥಿಯಾಗಿ ಮಾತನಾಡಿದ ಡಾ ರವೀಂದ್ರನಾಥ ಗೋಡೆಕರ, ಅನಾರೋಗ್ಯಕ್ಕೆ ತುತ್ತಾದ ಪ್ರತಿಯೊಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಪುನರ್ಜನ್ಮ ನೀಡುವ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಅಭಿಷೇಕ ಚೌಧರಿ, ಪೂಜಾ ಗಾಯಕ್ವಾಡ, ಭಾಗ್ಯಶ್ರೀ ಕೊತಂಬರಿ, ನಗ್ಮಾ ಪಾಟೀಲ ,ಸಂಗೀತಾ ಕರಾಬಿ,ಕಾವ್ಯಾ ಹಿಪ್ಪರಗಿ, ಸುಷ್ಮಾ ಚೌದ್ರಿ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು ಶಿಕ್ಷಕಿ ಪ್ರಿಯಾಂಕಾ ಹೊಸಮನಿ ಸ್ವಾಗತಿಸಿ ನಿರೂಪಿಸಿದರು