spot_img
spot_img

ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆಯ ಬೃಹತ್ ಕಾರ್ಯಕ್ರಮ

Must Read

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಜೂನ್ 21ರಂದು ಬೆಳಿಗ್ಗೆ 6ಕ್ಕೆ ಸಂಸ್ಥೆಯ ಕಾಲೇಜು ಮೈದಾನದಲ್ಲಿ ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬೃಹತ್‍ವಾಗಿ ಆಚರಿಸಲಿದ್ದಾರೆ. ತಾಲ್ಲೂಕು ಆಡಳಿತ ಕಚೇರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಹೆಸ್ಕಾಂ, ಸಮುದಾಯ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ಮಂಜುನಾಥ ಹಾಗೂ ಕರುನಾಡು ಸೈನಿಕ ತರಬೇತಿ ಕೇಂದ್ರಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಯವರು ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಉದ್ಘಾಟನೆ: ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಅವರ ಅಧ್ಯಕ್ಷತೆಯಲ್ಲಿ ಹಾರೂಗೇರಿಯ ವಿಚಾರ ವಾಹಿನಿಯ ಅಧ್ಯಕ್ಷ ಪ್ರೊ. ಐ.ಆರ್. ಮಠಪತಿ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಹರಿದ್ವಾರದ ಪತಂಜಲಿ ವಿಶ್ವವಿದ್ಯಾಲಯದ ವಿಶಾಲ ನಿಂಬಾಳ್ಕರ್ ಯೋಗ ಪ್ರದರ್ಶನವನ್ನು ನೀಡಲಿದ್ಧಾರೆ. ಸಂಸ್ಥೆಯ ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ ಅತಿಯಾಗಿರುವರು. ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಸಹ ಯೋಗ ದಿನಾಚರಣೆಯ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧಿಕ ಮಾಹಿತಿಗಾಗಿ ಮೊ. 9448860053 ಸಂಪರ್ಕಿಸಲು ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವಿ ನಾಗೇಶ್ ನಾಯಕಗೆ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ದತ್ತಿ ಪ್ರಶಸ್ತಿ ಪ್ರದಾನ

ಸವದತ್ತಿಃ ಸಮೀಪದ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಕವಿ, ಶಿಕ್ಷಕ ನಾಗೇಶ್ ಜೆ. ನಾಯಕ ಅವರಿಗೆ ಇತ್ತೀಚೆಗೆ ಬೆಳಗಾವಿ ಹಿಂದವಾಡಿಯ ಐ.ಎಂ.ಇ.ಆರ್. ಸಭಾಭವನದಲ್ಲಿ ಜರುಗಿದ ಬೆಳಗಾವಿ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!