ಕ್ಷೇತ್ರದಲ್ಲಿ ನೂರಾರು ಸಮಸ್ಯೆ; ಭರ್ಜರಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡ ಶಾಸಕರು

Must Read

ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಮೊಟ್ಟಮೊದಲಬಾರಿಗೆ ಒಂದೇ ಕುಟುಂಬದಲ್ಲಿ ಮೂವರಿಗೆ ಅಣ್ಣ ತಮ್ಮಂದಿರು ವಿಧಾನ ಸಭೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಿದ ಕ್ಷೇತ್ರದ ಮಹಾ ಜನತೆ ಆದರೆ ಹುಮನಾಬಾದ ವಿಧಾನ ಸಭಾ ಕ್ಷೇತ್ರ ರಾಜ್ಯದಲ್ಲಿ ಭಾರೀ ಸುದ್ದಿ ಮಾಡುತ್ತಿದೆ.

ಹುಮನಾಬಾದ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸೋಲಿಲ್ಲದ ಸರದಾರ ಎಂದೇ ಖ್ಯಾತರಾದ ಮಾಜಿ ಸಚಿವರು ಹಾಗೂ ಶಾಸಕರಾದ ಸನ್ಮಾನ್ಯ ರಾಜಶೇಖರ ಪಾಟೀಲ ಅವರು ೫೬ ನೇ ಹುಟ್ಟು ಆಚರಣೆ ಮಾಡಿಕೊಂಡಿದ್ದಾರೆ.

ಅತಿ ದೊಡ್ಡ ಪ್ರಮಾಣದಲ್ಲಿ ಕಾಯ೯ಕತ೯ರನ್ನು ಸೇರಿಸಿ ಹುಮನಾಬಾದನ ರಾಜರಾಜೇಶ್ವರಿ ನಗರದಲ್ಲಿ ೫೬ ನೇ ಹುಟ್ಟು ಆಚರಣೆ ಮಾಡಿಕೊಂಡಿದ್ದು ಸಹಜವಾದರೂ ಕ್ಷೇತ್ರದ ಸಮಸ್ಯೆಗಳ ಕಡೆಗೆವ ಶಾಸಕರು ಗಮನ ಕೊಟ್ಟಿದ್ದರೆ ಚೆನ್ನಾಗಿತ್ತು ಎಂದು ಜನತೆ ಮಾತನಾಡುವಂತಾಗಿದೆ.

ಒಂದೇ ಕುಟುಂಬದಲ್ಲಿ ಮೂವರು ನಾಯಕರು ಜನ ಪ್ರತಿನಿಧಿಗಳು ಇದ್ದು. ಕಾಂಗ್ರೆಸ್ ಪಕ್ಷದಿಂದ ಒಬ್ಬರು ವಿಧಾನ ಸಭಾ ಕ್ಷೇತ್ರದಿಂದ ಶಾಸಕರು ಇಬ್ಬರು ತಮ್ಮಂದಿರು ವಿಧಾನ ಪರಿಷತ್ ಸದಸ್ಯರು ಒಂದೇ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಆದರೆ ಈ ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸಲು ಸಾಧ್ಯ ಆಗುತ್ತಿಲ್ಲ ಎಂಬುದು ಕ್ಷೇತ್ರದ ಜನರ ಗೋಳು.

ಒಂದು ಕಡೆ ಶಾಸಕರು ಪಾಟೀಲ ಕುಟುಂಬದ ಸದಸ್ಯರು ತಮ್ಮ ಬೆಂಬಲಿಗರು ಜೊತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದರೆ ಇನ್ನೊಂದು ಕಡೆ ಆ ಕ್ಷೇತ್ರದ ಜನರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಬೀರಿದ್ದಾರೆ.

ತಾಲ್ಲೂಕಿನಲ್ಲಿ ಹಲವು ಖಾಸಗಿ ಕಂಪನಿಗಳು ಬೀರುತ್ತಿರುವ ತ್ಯಾಜ್ಯ ಹೊಗೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದರೂ ಇದ್ಯಾವುದರ ಬಗ್ಗೆ ತಲೆ ಕೆಡಿಸಿಕೊಳ್ಳದ ಶಾಸಕರು, ಕ್ಷೇತ್ರದ ರಸ್ತೆಗಳು ಹದಗೆಟ್ಟಿದ್ದರೂ ಗಮನ ಕೊಡದ ಶಾಸಕರು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಮೈ ಮರೆತಿದ್ದು ವಿಪರ್ಯಾಸ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸಿಂದಗಿ : ಉಲ್ಟಾ ಹಾರಿದ ರಾಷ್ಟ್ರಧ್ವಜ

ಸಿಂದಗಿ : ತಹಸೀಲ್ದಾರ ಕಾರ್ಯಾಲಯದ ಆವರಣದಲ್ಲಿ ಶನಿವಾರ ನಡೆದ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ನಡೆಯಿತು.ಶಾಸಕ ಅಶೋಕ...

More Articles Like This

error: Content is protected !!
Join WhatsApp Group