ಕಂದಾಯ ದಿನಾಚರಣೆ ನಿಮಿತ್ತ ಹಸಿರೋತ್ಸವ ಕಾರ್ಯಕ್ರಮ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸವದತ್ತಿ – ಸ್ವತಂತ್ರ ಭಾರತದ ಇತಿಹಾಸದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಹೃದಯ ಭಾಗವಾಗಿ ಸರಕಾರಗಳು ನೀಡಿದ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಕಂದಾಯ ಇಲಾಖೆಯವರು ಮಾನವ ಸಂಕುಲಕ್ಕೆ ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದಾರೆ ಸೌಲಭ್ಯಗಳನ್ನು ನೀಡುವಲ್ಲಿ ಯಾವುದೇ ಭೇದಭಾವ ಮಾಡದೇ ಕಾರ್ಯ ನಿರ್ವಹಿಸುತ್ತಿರುವರು. ಈ ಎಲ್ಲ ಸೌಲಭ್ಯಗಳನ್ನು ತಾಲೂಕು ಮಟ್ಟದಿಂದ ಗ್ರಾಮ ಹಳ್ಳಿಗಳಿಗೂ ನೀಡುತ್ತಿರುವ ನಮ್ಮ ಕಂದಾಯ ಇಲಾಖೆಯ ಎಲ್ಲ ಸಿಬ್ಬಂದಿಗಳಿಗೆ ಅಭಿನಂದಿಸುವೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಕೂಡಾ ಕಂದಾಯ ಇಲಾಖೆ ನೌಕರರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಸರಕಾರದಿಂದ ಬರುವ ಸಹಾಯ ಸೌಲಭ್ಯಗಳನ್ನು ಒದಗಿಸುವಲ್ಲಿ ನಾನು ಪ್ರಾಮಾಣಿಕವಾದ ಪ್ರಯತ್ನ ಮಾಡುವೆ ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾದ್ಯಕ್ಷ ಆನಂದ ಮಾಮನಿಯವರು ಮಾತನಾಡಿದರು.

ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ಹಸಿರೋತ್ಸವ ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುತ್ತಿರುವ ಚಿತ್ರ

ಅವರು ತಹಶೀಲ್ದಾರ ಕಾರ್ಯಾಲಯದಲ್ಲಿ ಜುಲೈ 1 ಕಂದಾಯ ದಿನಾಚರಣೆ ನಿಮಿತ್ಯ ಹಸಿರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಅವರು ಸವದತ್ತಿ ತಹಶೀಲ್ದಾರ ಕಾರ್ಯಾಲಯದ ಹತ್ತಿರ ಸುಮಾರು 5 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ಪಡೆದು ಶೀಘ್ರವಾಗಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ಬರತಕ್ಕಂತಹ ದಿನಗಳಲ್ಲಿ ಅನುದಾನದ ಲಭ್ಯತೆ ಮೇರೆಗೆ ತಾಲೂಕಿನ ಗ್ರಾಮಗಳಲ್ಲಿರುವ ತಲಾಠಿಗಳ ಚಾವಡಿಗಳನ್ನು ಅಭಿವೃದ್ದಿಪಡಿಸಲಾಗುವುದು ಕಂದಾಯ ದಿನಾಚರಣೆಯ ಸಂದರ್ಭದಲ್ಲಿ ಸಸಿ ನೆಡುವ ಕಾರ್ಯ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಸಿಗಳನ್ನು ನೆಟ್ಟು ಅವುಗಳನ್ನು ಬೆಳೆಸುವುದರಿಂದ ಮಾನವ ಸಂಕುಲದ ಜೊತೆಗೆ ಪ್ರಾಣಿ ಸಂಕುಲಗಳನ್ನು ರಕ್ಷಿಸಿದಂತಾಗುತ್ತದೆ ಎಂದರು.

- Advertisement -

ತಹಶೀಲ್ದಾರ ಪ್ರಶಾಂತ ಬಿ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಅತಿಥಿಗಳಾಗಿ ಗ್ರೇಡ್ 2 ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೊಳ. ಅರಣ್ಯ ಇಲಾಖೆ ಅಧಿಕಾರಿ ಸುನಿತಾ ನಿಂಬರಗಿ. ಶಶಿರಾಜ ವನಕಿ ಮತ್ತು ಮಂಜುನಾಥ. ಆರ್ ಸಿ ಹೂಲಿ.ಎ ಬಿ ಹುಣಶ್ಯಾಳ ಉಪಸ್ಥಿತರಿದ್ದರು ಗ್ರಾಮ ಲೆಕ್ಕಾಧಿಕಾರಿಗಳ ರಾಜ್ಯ ಉಪಾಧ್ಯಕ್ಷರಾದ ಮಡಿವಾಳೆಪ್ಪ ವಣ್ಣೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕಾ ಅಧ್ಯಕ್ಷ ಎಮ್ ಬಿ ಕರಡಿಗುಡ್ಡ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಕಂದಾಯ ಇಲಾಖೆ ನೌಕರರು ಮತ್ತು ಗ್ರಾಮಲೆಕ್ಕಾದಿಕಾರಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!