ವರದಕ್ಷಿಣೆಗಾಗಿ ಪತ್ನಿ ಕೊಂದು ಪಲ್ಲಂಗದ ಕೆಳಗೆ ಬಚ್ಚಿಟ್ಟ ಪತಿ !

Must Read

ಮೂಡಲಗಿ : ತವರು ಮನೆಯಿಂದ ಕೇಳಿದಷ್ಟು ವರದಕ್ಷಿಣೆ ತರಕಾರಿಗಳು ಪತ್ನಿಯನ್ನು ಕೊಂದು ಮಂಚದ ಕೆಳಗೆ ಶವ ಇಟ್ಟು, ಪತಿ ಪರಾರಿಯಾಗಿರುವ ಘಟನೆ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ

ಕಮಲದಿನ್ನಿಯ ನಿವಾಸಿ ಆಕಾಶ ಕುಂಬಾರ (36) ಎಂಬಾತನೇ ತನ್ನ ಪತ್ನಿಯನ್ನು ಕೊಲೆಗೈದಿರುವ ಆರೋಪಿ.‌ ಸಾಕ್ಷಿ ಆಕಾಶ ಕುಂಬಾರ(20) ಕೊಲೆಯಾಗಿರುವರು. ಸದ್ಯ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪರಾರಿಯಾಗಿರುವ ಪತಿಗಾಗಿ ಹುಡುಕಾಟ ತೀವ್ರಗೊಳಿಸಿದ್ದಾರೆ.

ನಾಲ್ಕು ತಿಂಗಳ ಹಿಂದಷ್ಟೇ ಆಕಾಶ ಜೊತೆಗೆ ಸಾಕ್ಷಿ ಮದುವೆಯಾಗಿತ್ತು. ಮದುವೆಯ ನಂತರ ತವರಿನಿಂದ ಮತ್ತಷ್ಟು ವರದಕ್ಷಿಣೆ ತರುವಂತೆ ಆಕಾಶ ಪೀಡಿಸುತ್ತಿದ್ದ ಎನ್ನಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಕೊಲೆ ಮಾಡಿ, ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ಪತಿ ಪರಾರಿಯಾಗಿದ್ದಾನೆ. ಇತ್ತ ಮುಂಬೈಗೆ ಹೋಗಿದ್ದ ಅತ್ತೆ ಮರಳಿ ಮನೆಗೆ ಬಂದಾಗ ಮನೆಯಲ್ಲಿ ದುರ್ವಾಸನೆ ತುಂಬಿಕೊಂಡಿದ್ದರಿಂದ ಕೃತ್ಯ ಹೊರಗೆ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ತಹಶಿಲ್ದಾರ್ ಶ್ರೀಶೈಲ ಗುಡಮೆ, ಸಿಪಿಐ ಶ್ರೀಶೈಲ ಬ್ಯಾಕೂಡ, ಪಿಎಸೈ ರವಿ ಪೂಜಾರಿ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group