ಹಿಂದಿದ್ದವರು ಕೆಲಸ ಮಾಡದ್ದರಿಂದ ನನಗೆ ಈ ಭಾಗ್ಯ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Must Read

ಕೊಂಡಸಕೊಪ್ಪದಲ್ಲಿ ದುರ್ಗಾದೇವಿ ದೇವಸ್ಥಾನ ಉದ್ಘಾಟನೆ ವೇಳೆ ಸಚಿವರ ಮಾತು

ಬೆಳಗಾವಿ: ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಭಕ್ತಿ -ಭಾವನೆಯಿಂದ ನಡೆದುಕೊಂಡರೆ ಮನಸ್ಸು ಪರಿಶುದ್ಧವಾಗುತ್ತದೆ. ದೇವಸ್ಥಾನಗಳಿಂದ ಊರಿಗೆ ಅಭಿವೃದ್ಧಿ, ಸಮೃದ್ಧಿ, ಶಾಂತಿ ಲಭಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೊಂಡಸಕೊಪ್ಪ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ದುರ್ಗಾದೇವಿ ಮಂದಿರದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಊರು ಉದ್ಧಾರವಾಗಿ, ಕೆಟ್ಟ ಛಾಯೆ ತಾಗಬಾರದು ಎಂಬ ಉದ್ದೇಶದಿಂದ ದೇವಸ್ಥಾನಗಳನ್ನು ನಿರ್ಮಾಣ ಮಾಡಿ ವಾಸ್ತು ಶಾಂತಿ ಮಾಡಲಾಗುತ್ತದೆ. ಕೊಂಡಸಕೊಪ್ಪ ಗ್ರಾಮದಲ್ಲಿ 4 ಗುಡಿಗಳನ್ನು ನಿರ್ಮಾಣ ಮಾಡಲಾಗಿದ್ದು, ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 7 ವರ್ಷದಲ್ಲಿ 150ಕ್ಕೂ ಹೆಚ್ಚು ಗುಡಿಗಳನ್ನು ಜೀರ್ಣೋದ್ಧಾರ ಮಾಡುವ ಭಾಗ್ಯ ನನಗೆ ಸಿಕ್ಕಿದೆ. ಈ ಹಿಂದೆ ಇದ್ದವರ ಮೇಲೆ ನಾನು ಆರೋಪ ಮಾಡಲು ಹೋಗುವುದಿಲ್ಲ. ಆದರೆ ಅವರು ಅಭಿವೃದ್ದಿ ಕೆಲಸ ಮಾಡದ್ದರಿಂದ ನನಗೆ ಇಂತಹ ಅವಕಾಶ ಸಿಕ್ಕಿದೆ. ಎಲ್ಲರಿಗೂ ಈ ಭಾಗ್ಯ ಸಿಗುವುದಿಲ್ಲ ಎಂದರು.

ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಾನು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ. ನಾನಾಗಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಾಗಲಿ ಕೊಟ್ಟ ಮಾತನ್ನು ಎಂದೂ ತಪ್ಪುವುದಿಲ್ಲ. ಒಮ್ಮೆ ಮಾತು ಕೊಟ್ಟರೆ ಮಾಡಿಯೇ ತೀರುತ್ತೇವೆ ಎಂದು ಸಚಿವರು ಹೇಳಿದರು.

ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ಸೇರಿಕೊಳ್ಳಿ…
ಎಲ್ಲರೂ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಬ್ಯಾಂಕ್ ಸದಸ್ಯರಾಗಬೇಕು. ಕಡಿಮೆ ಬಡ್ಡಿದರದಲ್ಲಿ ಎಲ್ಲರಿಗೂ ಸಾಲದ ಸೌಲಭ್ಯ ಸಿಗಲಿದ್ದು, ಎಲ್ಲ ರೀತಿಯ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ನಾನು ಬಸವ ತತ್ವದಲ್ಲಿ ಅಂಬೇಡ್ಕರ್ ತತ್ವದಲ್ಲಿ ವಿಶ್ವಾಸ ಇಟ್ಟಿದ್ದೇನೆ. ಚುನಾವಣೆ ಮುಗಿದ ನಂತರ ರಾಜಕಾರಣ ಮಾಡುವುದಿಲ್ಲ. ನಿಮ್ಮ ಬೆಂಬಲವೇ ನನಗೆ ಶಕ್ತಿ. ನಿಮ್ಮ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಕೆಲಸ ಮಾಡುವೆ ಎಂದು ಸಚಿವರು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರವನ್ನು ಪರಿವಾರದ ರೀತಿಯಲ್ಲಿ ಪರಿಗಣಿಸಿ ಅಭಿವೃದ್ಧಿ ಮಾಡುತ್ತಿದ್ದಾರೆ. ದೇವಸ್ಥಾನದ ಜೀರ್ಣೋದ್ಧಾರ ಮಾಡುವ ಮೂಲಕ, ಗ್ರಾಮದ ಹಲವು ವರ್ಷಗಳ ಬೇಡಿಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಈಡೇರಿದೆ ಎಂದು ಹೇಳಿದರು.

ಆ ದೇವರ ಇಚ್ಛಾಶಕ್ತಿ ಜೊತೆಗೆ ಆರ್ಥಿಕ ಶಕ್ತಿ ಇರಬೇಕು. ಪ್ರಯತ್ನದ ಜೊತೆಗೆ ದೇವರ ಆಶೀರ್ವಾದ ಇದ್ದರೆ ಕೆಲಸ ಮಾಡಬಹುದು. ಎಲ್ಲ ಕೆಲಸಗಳಲ್ಲಿ ನಿಮ್ಮ ಜೊತೆಗೆ ಇರುತ್ತೇವೆ. ದಿನನಿತ್ಯ ನಿಮ್ಮ ಜೊತೆ ಇರುವವರನ್ನು ಬೆಂಬಲಿಸಬೇಕು. ಲಕ್ಷ್ಮೀ ಹೆಬ್ಬಾಳಕರ್ ಕ್ಷೇತ್ರದ ಆಸ್ತಿ, ಪಕ್ಷಾತೀತ ನಾಯಕಿಯಾಗಿ ಬೆಳೆಯುತ್ತಿದ್ದಾರೆ. ಎಲ್ಲರೂ ಗೌರವ ಕೊಡುತ್ತಾರೆ. ಅವರು ಹೇಳಿದ ಕೆಲಸವನ್ನು ಎಲ್ಲ ಅಧಿಕಾರಿಗಳೂ ಮಾಡಿಕೊಡುತ್ತಾರೆ. ಅವರನ್ನು ಬೆಂಬಲಿಸುವ ಮೂಲಕ ಈ ಆಸ್ತಿಯನ್ನು ಕಾಪಾಡಿಕೊಳ್ಳಬೇಕು ಎಂದರು.

ಈ ವೇಳೆ ಮಾತನಾಡಿದ ಗ್ರಾಮ ಪಂಚಾಯತಿ ಉಪಾಧ್ಯಕ್ಷ ವಿಠ್ಠಲ ಸಾಂಬ್ರೆಕರ, ಈ ಮೊದಲು ಕ್ಷೇತ್ರ ಅಭಿವೃದ್ಧಿ ಕಂಡಿರಲಿಲ್ಲ. ಈಗ ಲಕ್ಷ್ಮೀ ಹೆಬ್ಬಾಳಕರ್ ಅವರಿಂದಾಗಿ ಗ್ರಾಮದ ಚಿತ್ರಣವೇ ಬದಲಾಗಿದೆ. ರಸ್ತೆ, ಚರಂಡಿ, ಕುಡಿಯುವ ನೀರಿನ ಸೌಲಭ್ಯ ನೀಡಲಾಗಿದ್ದು, ಒಂದೇ ಊರಿಗೆ 3-4 ದೇವಸ್ಥಾನ ನಿರ್ಮಾಣ ಮಾಡಿದ್ದಾರೆ. ಅವರ ಜೊತೆಗೆ ಸದಾ ನಾವಿರುತ್ತೇವೆ ಎಂದರು.

ಈ ಸಂದರ್ಭದಲ್ಲಿ ಪಾವನಕ್ಷೇತ್ರ ಬಡೇಕೊಳ್ಳಮಠದ ಸದ್ಗುರು ಶಿವಯೋಗಿ ಶ್ರೀ ನಾಗೇಂದ್ರ ಮಹಾಸ್ವಾಮಿಗಳು, ಸುರೇಶ ಕರಗುಪ್ಪಿಕರ್, ಗಂಗಾರಾಮ ಅಷ್ಟೇಕರ್, ವಿಠ್ಠಲ ಸಾಂಬ್ರೇಕರ್, ಸಿ.ಸಿ‌.ಪಾಟೀಲ, ಸಹದೇವ್ ಪೂಜೇರಿ, ಶ್ರೀಕಾಂತ ಪಾಟೀಲ, ರಾಮಾ ಸಾಂಬ್ರೇಕರ್, ಜ್ಯೋತಿಬಾ ಕುದ್ರೆಮನಿ, ಮನೋಹರ್ ಮುಚ್ಚಂಡಿ, ಪದ್ಮರಾಜ ಪಾಟೀಲ, ಅಡಿವೆಪ್ಪ ಡೊಳಗಾರ್, ಚಾರ್ಲಿ ಗವಳಿ, ಆಶಾ ಗುಡಮಟ್ಟಿ, ಭೀಮಸೇನ ಕರಗುಪ್ಪಿಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Latest News

ಅರಭಾವಿಯಲ್ಲಿ ವಿಶ್ವ ಮಣ್ಣು ದಿನಾಚರಣೆ

ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ, ಅರಭಾವಿಯಲ್ಲಿ ದಿನಾಂಕ: ೦೫.೧೨.೨೦೨೫ ರಂದು ವಿಶ್ವ ಮಣ್ಣು ದಿನಾಚರಣೆಯನ್ನು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ತೋಟಗಾರಿಕೆ ವಿಸ್ತರಣಾ ಮತ್ತು...

More Articles Like This

error: Content is protected !!
Join WhatsApp Group