spot_img
spot_img

ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ: ಲಖನ್ ಜಾರಕಿಹೊಳಿ

Must Read

spot_img
- Advertisement -

ಬೆಳಗಾವಿ: ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.

ಬುಧವಾರದಂದು ಸುಳೇಭಾವಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಿದ ಅವರು, ವಿರೋಧಿಗಳ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಹೇಳಿದರು.

ಚುನಾವಣೆ ಬಂದ ಮೇಲೆ ನಿಮ್ಮನ್ನು ಸುತ್ತುವರಿಯುವ ಅಭ್ಯರ್ಥಿಗಳು ಆಮೇಲೆ ಒಮ್ಮೆಲೆ ಕಾಣೆಯಾಗಿಬಿಡುತ್ತಾರೆ. ಅಂಥವರನ್ನು ದೂರವಿಡಿ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

- Advertisement -

20 ವರ್ಷಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ಒಳ್ಳೆಯ ಒಡನಾಟ ಹೊಂದಿದ್ದೇನೆ. ನಿಮ್ಮ ಪ್ರೀತಿ ಅಭಿಮಾನಕ್ಕೆ ಸದಾ ಋಣಿಯಾಗಿರುವೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ತಾರತಮ್ಯ ಮಾಡುವುದಿಲ್ಲ ಎಂದು ಲಖನ್ ಜಾರಕಿಹೊಳಿ ಅವರು ಹೇಳಿದರು.

ಮಾರಿಹಾಳ ಗ್ರಾಮ ಪಂಚಾಯತ ಸದಸ್ಯರು ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರನ್ನು ಬೆಂಬಲಿಸಿ ಒಗ್ಗಟ್ಟಿನಿಂದ ಮತ ಚಲಾಯಿಸುವುದಾಗಿ ಪ್ರಕಟಿಸಿದರು.

ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೃಷ್ಣಾ ಅನಗೋಳಕರ, ಜಿಪಂ ಮಾಜಿ ಸದಸ್ಯ ಟಿ.ಆರ್. ಕಾಗಲ, ಜಿಪಂ ವ್ಯಾಪ್ತಿಯ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಅಭಿದಾಬೇಗಂ ಸನದಿ, ಭಾಗ್ಯಶ್ರೀ ಹಣಬರ, ಅಲ್ಲನ್ನಾ ನಾಯ್ಕ, ನಾಗಪ್ಪ ಕಾಲೇರಿ, ಅಲ್ಲಾವುದ್ದೀನ್ ಫಣಿಬಂಧ, ಬಸವರಾಜ ಮಾದಬನವರ, ಮಹೇಶ ಸೋನೆನ್ನವರ, ರತ್ನವ್ವ ಕೋಲಕಾರ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group