ಭೀಕರ ಅಪಘಾತ : ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವು

Must Read

ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಮಹಾಂತೇಶ ಅವರ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆನ್ನಲಾಗಿದೆ.

1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಮಹಾಂತೇಶ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ತಮ್ಮ ಜನಸ್ನೇಹಿ ಕಾರ್ಯಗಳಿಂದ ರಾಜ್ಯದಲ್ಲಿ ಹೆಸರಾಗಿದ್ದರು.

LEAVE A REPLY

Please enter your comment!
Please enter your name here

Latest News

ಬಾಲಿವುಡ್ ಬೆಡಗಿಯಾಗಿ ಮೆರೆದ ಕನ್ನಡದ ಹುಡುಗಿ ಶಾಂತಾ ಹುಬ್ಳಿಕರ

ಮಹಾರಾಷ್ಟ್ರ ಮತ್ತು ಭಾರತೀಯ ಚಿತ್ರ ರಂಗಕ್ಕೆ ಕನ್ನಡದ ಕೊಡುಗೆ ಅಪಾರ. ಅಮೀರ್ ಬಾಯಿ ಕರ್ನಾಟಕಿ ಗುರು ದತ್ತ ಶ್ಯಾಮ ಬೆನಗಲ್ ಗಿರೀಶ್ ಕಾರ್ನಾಡ ವಿ ಶಾಂತಾರಾಮ...

More Articles Like This

error: Content is protected !!
Join WhatsApp Group