ಎಲ್ಲ ಜಿಲ್ಲೆಗಳಲ್ಲಿ ಐಸಿಡಿಎಸ್ ಯೋಜನೆ

Must Read

ಮೂಡಲಗಿ: ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ಐಸಿಡಿಎಸ್) ಯೋಜನೆಯಡಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ. ರಾಜ್ಯಾದ್ಯಂತ 51,23,930 ಫಲಾನುಭವಿಗಳನ್ನು ಗುರುತಿಸಲಾಗಿದೆ. ಅಂಗನವಾಡಿ ಸೇವಾ ಯೋಜನೆಯಡಿ ಪ್ರಸಕ್ತ 2020-21ನೇ ಸಾಲಿನಲ್ಲಿ ರೂ. 68,641,75 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು.

ಬುಧವಾರ ಫೆ-09 ರಂದು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ಐಸಿಡಿಎಸ್) ಯೋಜನೆ ಮತ್ತು ಅಂಗನವಾಡಿ ಸೇವಾ ಯೋಜನೆ ಅನುಷ್ಠಾನದ ಕುರಿತು ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಇಲಾಖೆಯು ಅಂಗನವಾಡಿ ಸೇವೆಗಳು, ಒನ್ ಸ್ಟಾಪ್ ಸೆಂಟರ್ ಮತ್ತು ಯೂನಿವರ್ಸಲ್ ಲೈಜೇಶನ್ ಆಫ್ ವುಮೆನ್ ಹೆಲ್ಪ್‍ಲೈನ್, ಸ್ವಧಾರ ಗೃಹ, ಉಜ್ವಲಾ ಯೋಜನೆ, ವರ್ಕಿಂಗ್ ಉಮೇನ್ ಹಾಸ್ಟೇಲ್, ಹದಿಹರೆಯದ ಬಾಲಕಿಯರ ಯೋಜನೆ, ಪೋಶನ್ ಅಭಿಯಾನ, ಬೇಟಿ ಬಚಾವೋ ಬೇಟಿ ಪಢಾವೋ, ಮಹಿಳಾ ಶಕ್ತಿ ಕೇಂದ್ರ, ಪ್ರಧಾನ್ ಮಂತ್ರಿ ಮಾತೃ ವಂದನಾ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದ್ದಾರೆ ಎಂದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group