ಇಂದಿನಿಂದ ರಾಜ್ಯ ಸರ್ಕಾರದ ಎಲ್ಲ ನೌಕರರು, ಅಧಿಕಾರಿಗಳು ಹಾಗೂ ಸರ್ಕಾರದ ಅಧೀನದ ನಿಗಮ ಮಂಡಳಿಗಳ ಅಧಿಕಾರಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳಲ್ಲಿ ನೌಕರರು, ಅಧಿಕಾರಿಗಳು ಹಾಗೂ ಸರ್ಕಾರದ ಅಧೀನದ ನಿಗಮ ಮಂಡಳಿಗಳ ಅಧಿಕಾರಿಗಳು ಗುರುತಿನ ಚೀಟಿಯಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇದರಿಂದ ಸಾರ್ವಜನಿಕರಿಗೆ ಅಧಿಕಾರಿಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಕಾರಣ ಇಂದಿನಿಂದ ಎಲ್ಲ ಅಧಿಕಾರಿಗಳು ಗುರುತಿನ ಚೀಟಿ ಧರಿಸುವುದು ಕಡ್ಡಾಯವೆಂಬುದಾಗಿ ಆದೇಶ ಹೊರಡಿಸಲಾಗಿದೆ