ಆರ್ ಎಸ್ ಎಸ್ ಗೆ ತಗುಲಿಕೊಂಡರೆ ಕಾಂಗ್ರೆಸ್, ಜೆಡಿಎಸ್ ಗೆ ಲಾಭವಿಲ್ಲ – ಈಶ್ವರಪ್ಪ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸಿಂದಗಿ: ಮುಂದಿನ ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಈವರೆ ಸಿದ್ದರಾಮಯ್ಯ ಮತ್ತು ಡಿಕೆಶಿ ನಾನು ಸಿಎಂ ನಾನು ಸಿಎಂ ಅಂತಿದ್ದರು. ಒಬ್ಬರು ಎಡಕ್ಕೆ ಎಳೆದರೆ, ಇನ್ನೊಬ್ಬರು ಬಲಕ್ಕೆ ಎಳೆಯುತ್ತಾರೆ. ಇದೀಗ ಅನಿವಾರ್ಯವಾಗಿ ಒಂದಾಗಿದ್ದಾರೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ಅಭಿವೃದ್ಧಿ ಮೆಚ್ಚಿ ಹಾನಗಲ್, ಸಿಂದಗಿ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಜನ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ. ಭೂತ್ ಮಟ್ಟದಿಂದಲೇ ತಯಾರಿ ಮಾಡಿಕೊಂಡಿರುವುದಾಗಿ ತಿಳಿಸಿದರು.

- Advertisement -

ಸಚಿವ ಗೋವಿಂದ ಕಾರಜೋಳ ಮಾತನಾಡಿ, ಐಟಿ ಸ್ವಾಯತ್ತ ಸಂಸ್ಥೆ. ದಾಳಿಗೂ ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ. ವಿರೋಧ ಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದ ಅವರು ಪಕ್ಕದ ಮನೆ ಯಾರದ್ದು ಅಂತ ಗೊತ್ತಿರದೆ ತಮ್ಮ ಸ್ವಂತ ಪ್ರತಿಭೆಯಿಂದ ಐಎಎಸ್, ಐಪಿಎಸ್ ಪಾಸಾಗಿದ್ದಾರೆ. ಆರ್.ಎಸ್.ಎಸ್ ಗೆ ತಗಲಿಕೊಂಡರೆ ಹಾಕಿದರೆ ಕಾಂಗ್ರೆಸ್, ಜೆಡಿಎಸ್ ಗೆ ಲಾಭ ಆಗುವುದಿಲ್ಲ. ಅವರಿಗೆ ಮಾಡಲು ಕೆಲಸ ಇಲ್ಲ. ಅದಕ್ಕೆ ಈ ರೀತಿ ಹೇಳಿಕೆಯನ್ನು ನೀಡುತ್ತಾರೆ. ಇದು ಬಿಜೆಪಿ ಕಾಂಗ್ರೆಸ್ ನಡುವಿನ ಸ್ಪರ್ಧೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮಾತನಾಡಿ, ಬಹಳ ಅಂತರದಿಂದ ಗೆಲ್ಲಲು ಕಾರ್ಯಸೂಚಿ ಮಾಡಿಕೊಂಡಿದ್ದೇವೆ. ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಕೆಲಸ ಮಾಡಲು ತಂಡಗಳು ಸಜ್ಜಾಗಿವೆ. ಏಳು ತಂಡಗಳನ್ನು ಮಾಡಲಾಗಿದೆ. ನಾನು, ಗೋವಿಂದ ಕಾರಜೋಳ, ವಿ.ಸೋಮಣ್ಣ, ಸಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ, ರಮೇಶ ಜಿಗಜಿಣಗಿ, ಬಸನಗೌಡ ಪಾಟೀಲ ಯತ್ನಾಳ ಇಲ್ಲಿಯೇ ಇದ್ದು ಪ್ರಚಾರ ಮಾಡುತ್ತೇವೆ. ಎರಡು ದಿನ ಈಶ್ವರಪ್ಪ ಅವರೂ ಬರುತ್ತಾರೆ. ಮುಖ್ಯಮಂತ್ರಿಗಳು ಹಾಗೂ ಯಡಿಯೂರಪ್ಪ ಸಹ ಎರಡು ದಿನ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!