ಕನ್ನಡ ಉಳಿದರೆ ನಾವು ಉಳಿಯುತ್ತೇವೆ – ಡಾ.ಪಡಶೆಟ್ಟಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಸಿಂದಗಿ– ಕನ್ನಡ ತಾಯಿ ಭಾಷೆ,ಕನ್ನಡ ಅನ್ನದ ಭಾಷೆ, ಕನ್ನಡ ಜೀವನ ಭಾಷೆ, ಕನ್ನಡ ಉಳಿದರೆ ಮಾತ್ರ ನಾವು ಉಳಿಯುತ್ತೇವೆ ಎಂದು ಹಿರಿಯ ಸಾಹಿತಿ ಡಾ.ಎಂ.ಎಂ. ಪಡಶೆಟ್ಟಿ ಹೇಳಿದರು.

ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ಕನ್ನಡ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡದ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ. ಮಮ್ಮಿ-ಡ್ಯಾಡಿ ಸಂಸ್ಕೃತಿಯನ್ನು ತೆಗೆದುಹಾಕಿ, ಅಪ್ಪ-ಅಮ್ಮಅನ್ನೋದನ್ನು ಮಕ್ಕಳಿಗೆ ಕಲಿಸಿಕೊಡಬೇಕು, ಕನ್ನಡ ನಾಡಿನ ಇತಿಹಾಸ ಪರಂಪರೆ ಹಲವಾರು ಶಾಸನಗಳಲ್ಲಿ, ತ್ರಿಪದಿಗಳಲ್ಲಿ ಪರಿಚಯಿಸಿದ್ದಾರೆ. ಕನ್ನಡ ಭಾಷೆ ಸುಮಾರು 2500 ವರ್ಷಗಳ ಇತಿಹಾಸ ಹೊಂದಿದ ಭಾಷೆ. ಶಿಕ್ಷಕರು ಮಕ್ಕಳಲ್ಲಿ ಕನ್ನಡದ ಪರಿಕಲ್ಪನೆಯನ್ನು ಮೂಡಿಸುವುದರ ಮೂಲಕ ಕನ್ನಡ ಜಾಗೃತಿ ಮಾಡಬೇಕಾದುದ್ದು ಅನಿವಾರ್ಯವಾಗಿದೆ ಎಂದರು.

- Advertisement -

ಈ ಸಂದರ್ಭದಲ್ಲಿ ಕನ್ನಡ ಸಂಘದ ಮುಖ್ಯಸ್ಥ ದಾನಯ್ಯ ಮಠಪತಿಯವರು ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಸಂಘ ರಚನೆ ಮಾಡಿದ್ದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ. ಕನ್ನಡ ಸಂಘದ ಅಡಿಯಲ್ಲಿ ಅನೇಕ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಗಳನ್ನು ಮಾಡುವದರ ಜೊತೆಗೆ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು, ಕನ್ನಡದ ಉಳಿವಿಗಾಗಿ ನಾವೆಲ್ಲರೂ ಶ್ರಮವಹಿಸಬೇಕಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಶರಣಬಸವ ಜೋಗೂರ ಮಾತನಾಡಿ, ಭವಿಷ್ಯದ ಶಿಕ್ಷಕರು ಕನ್ನಡವನ್ನು ಸರಿಯಾಗಿ ಬಳಸುವ ಗುಣವನ್ನು ಹೊಂದಬೇಕು, ಜೊತೆಗೆ ಕನ್ನಡದಲ್ಲಿನ ಶಬ್ದಪ್ರಯೋಗ, ಅಕ್ಷರ ಪ್ರಯೋಗ ಸ್ಪಷ್ಟವಾಗಿ ರೂಢಿಸಿಕೊಂಡು ಮಕ್ಕಳಿಗೆ ಜ್ಞಾನಾರ್ಜನೆಯನ್ನು ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾದ್ಯಾಪಕ ಶಾಂತು ಹಿರೇಮಠ ಮಾತನಾಡಿದರು. ವೇದಿಕೆಯ ಮೇಲೆ ಕನ್ನಡ ಸಂಘದ ಕಾರ್ಯದರ್ಶಿ ಪ್ರದೀಪ ಹದರಿ ಉಪಸ್ಥಿತರಿದ್ದರು.

ಮೆರವಣಿಗೆ- ಕಾರ್ಯಕ್ರಮಕ್ಕಿಂತ ಮುಂಚೆ ಕನ್ನಡಾಂಬೆಯ ಭಾವಚಿತ್ರದ ಮೆರವಣಿಗೆ ಜಾನಪದ ಶೈಲಿಯಲ್ಲಿ ವಿನೂತನಗೊಂಡಿತು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಡೊಳ್ಳುಕುಣಿತ ಆಕರ್ಷಣೆಗೊಂಡಿತು.

ಕಾರ್ಯಕ್ರಮದಲ್ಲಿ ಎಂ.ಎಸ್. ಹಯ್ಯಾಳಕರ, ಡಾ.ಚನ್ನಪ್ಪಕಟ್ಟಿ, ಪಿ.ಎಂ.ಮಡಿವಾಳರ, ಮಹಾಂತೇಶ ನೂಲಾನವರ, ಅಶೋಕ ಬಿರಾದಾರ, ಶಿವಮಾಂತ ಪೂಜಾರಿ ಹಾಗೂ ಮಹಾವಿದ್ಯಾಲಯದ ಉಪನ್ಯಾಸಕರಾದ ಜೆ.ಸಿ.ನಂದಿಕೋಲ, ಪಿ.ಸಿ.ಕುಲಕರ್ಣಿ, ಎಸ್.ವಿ. ಚವ್ಹಾಣ, ಡಾ.ಕೆ.ಆರ್. ರಾಠೋಡ, ಎನ್.ಬಿ. ಪೂಜಾರಿ, ವಿ.ಕೆ.ಬಜಂತ್ರಿ, ವಿದ್ಯಾ ಮೊಗಲಿ, ಚನ್ನುಕತ್ತಿ, ಶಿವು ಕತ್ತಿ, ಶಿವು ಸೊನ್ನದ ಸೇರಿದಂತೆ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಶಿಕ್ಷಣಾರ್ಥಿ ಅರ್ಪಿತಾಕೋಟಿ ಮತ್ತು ಮಹಾಂತೇಶ ನಾಯ್ಕೋಡಿಜಾನಪದ ಶೈಲಿಯಲ್ಲಿ ನಿರೂಪಿಸಿದರು.ಪ್ರಶಿಕ್ಷಣಾರ್ಥಿ ಶಶಿಕಲಾ ಪೂಜಾರಿ ವಂದಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!