spot_img
spot_img

ಮೂಡಲಗಿಯಲ್ಲಿ ಅಕ್ರಮ ಮದ್ಯ ಮಾರಾಟ ಬಲುಜೋರು; ಹೀಗಾದರೆ ಶಾಂತಿಯುತ ಚುನಾವಣೆ ಸಾಧ್ಯವೆ?

Must Read

- Advertisement -

ಶಿಕ್ಷಣ ಕಲಿಯಬೇಕಾದ ಬಾಲಕನಿಂದ ಅಕ್ರಮ ಮದ್ಯ ಮಾರಾಟ

ವರದಿ: ಮಲ್ಲು ಬೋಳನವರ

ಮೂಡಲಗಿ: ತಾಲೂಕಿನ ಹಳ್ಳಿ, ಹಳ್ಳಿಗಳಲ್ಲಿ ಮಿನಿ ಬಾರಗಳು ತಲೆ ಎತ್ತಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು, ಮದ್ಯ ವ್ಯಸನಿಗಳು ಅಮಲಿನಲ್ಲಿಯೇ ನಿತ್ಯ ಕಾಲಕಳೆಯುವಂತಾಗಿದೆ. ಇದರಿಂದ ಮಕ್ಕಳು, ಮಹಿಳೆಯರು, ವೃದ್ಧ ತಂದೆ-ತಾಯoದಿರು ಅಕ್ರಮ ಮದ್ಯಮಾರಾಟಗಾರರಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ.

- Advertisement -

ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಗ್ರಾಮೀಣ ಪ್ರದೇಶದಲ್ಲಿ ನಾಯಿ ಕೊಡೆಗಳಂತೆ ಎಲ್ಲಿ ಬೇಕೆಂದರಲ್ಲಿ ಅಕ್ರಮ ಮದ್ಯದ ಅಂಗಡಿಗಳು ತಲೆ ಎತ್ತಿವೆ.

ಪಾನ್, ಬೀಡಾ ಅಂಗಡಿ, ಹೋಟೆಲ್, ಕೋಲ್ಡ್ರಿಂಕ್ಸ್ ಅಂಗಡಿ, ಡಾಬಾಗಳು ಸೇರಿದಂತೆ ಇತರೆ ಅಂಗಡಿಗಳಲ್ಲಿ ಇಷ್ಟು ದಿನಗಳ ಕಾಲ ಅಕ್ರಮ ಮದ್ಯ ಮಾರಾಟ ಜೋರಾಗಿತ್ತು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಅನೇಕ ವರ್ಷಗಳಿಂದ ಸಂಘ, ಸಂಸ್ಥೆಗಳು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಅಕ್ರಮ ಮದ್ಯ ಮಾರಾಟ ಸ್ಥಗಿತಗೊಂಡಿರಲಿಲ್ಲ.

ಇವಾಗ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದರೂ ಅಕ್ರಮ ಮದ್ಯ ಮಾರಾಟ ಸ್ಥಗಿತಗೊಂಡಿಲ್ಲ ಎಂಬುದು ವಿಷಾದಕರ ಸಂಗತಿ.

- Advertisement -

ಚುನಾವಣೆ ಹೊಸ್ತಿನಲ್ಲಿ ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದರೂ ಕೂಡಾ ಕೆಲವು ಪಾನ್, ಬೀಡಾ ಅಂಗಡಿ, ಹೋಟೆಲ್, ಕ್ರೋಲ್ಡ್ಡ್ರಿಂಕ್ಸ್ ಅಂಗಡಿ, ಡಾಬಾಗಳಲ್ಲಿ ಅಕ್ರಮ ಮಾರಾಟ ಮಾಡಲಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿ ಎಂಬಂತೆ “ಮೂಡಲಗಿ ಸಮೀಪದ ಗುರ್ಲಾಪೂರ ಕ್ರಾಸ್ ಬಳಿ ಸಣ್ಣ ವಯಸ್ಸಿನ ಬಾಲಕ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ದ್ಯಶ ಕಂಡು ಬಂದಿದ್ದು,” ಶಿಕ್ಷಣ ಕಲಿಯಬೇಕಾದ ಬಾಲಕ ಈ ರೀತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ದಂಧೆಗೆ ಇಳಿದಿರುವುದು ಎಷ್ಟೋಂದು ಸರಿ ? ನೀತಿ ಸಂಹಿತೆ ಜಾರಿಯಾದ ಬೆನ್ನಲೆ ಅಕ್ರಮ ಮದ್ಯ ಮಾರಾಟ ನಿಯಂತ್ರಿಸಬೇಕಾಗಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕರ್ತವ್ಯ. ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪವಾಗಿದೆ.

ಈ ಬಗ್ಗೆ ಅರಭಾವಿ ಚುನಾವಣಾ ಅಧಿಕಾರಿ ಪ್ರಭಾವತಿ ಎಫ್. ಅವರನ್ನು ಸಂಪರ್ಕಿಸಿದಾಗ ಅವರು ಹೇಳಿದ್ದಿಷ್ಟು…

ಈಗಾಗಲೇ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವಂಥ ರಾಜಾಪೂರ, ನಾಗನೂರ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತಲಿನ ಧಾಬಾ, ಪಾನ್, ಬೀಡಾ ಅಂಗಡಿಗಳ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಧೀಡಿರ್ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಪ್ರಕರಣ ದಾಖಲಿಸಲಾಗುವುದು. ಗುರ್ಲಾಪೂರದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಾಲಕನ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅದರ ಬಗ್ಗೆ ಪರಿಶೀಲನೆ ನಡೆಸಿ ಮಾರಾಟದಾರರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದು.”

ಗೋಕಾಕ ವಲಯದ ಅಬಕಾರಿ ನಿರೀಕ್ಷಕರಾದ ಆಶಾರಾಣಿ ಕೆ. ಅವರು ಮಾತನಾಡಿ… ಅಧಿಕಾರಿಗಳ ಕಣ್ಣುತಪ್ಪಿಸಿ ಕೆಲವರು ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆ ಪ್ರತಿನಿತ್ಯ ಗ್ರಾಮಗಳಿಗೆ ಭೇಟಿ ನೀಡಲಾಗುತ್ತಿದ್ದು ಮಾರಾಟ ಮಾಡುತ್ತಿರುವವರ ಮೇಲೆ ಈಗಾಗಲೇ ಪ್ರಕರಣ ದಾಖಲಿಸಿಲಾಗಿದೆ. ಗುರ್ಲಾಪೂರದಲ್ಲಿ ಬಾಲಕ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.

ಚುನಾವಣೆಗಳು ಶಾತಿಯುತವಾಗಿ ನಡೆಯಬೇಕಾದರೆ ಮದ್ಯದ ಪೂರೈಕೆ ನಿಲ್ಲಬೇಕಾಗಿದೆ ಆದರೆ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದರೆ ಕ್ಷೇತ್ರದಲ್ಲಿ ಗಲಭೆಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಬಹುದು. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕಾಗಿದೆ.

- Advertisement -
- Advertisement -

Latest News

Shahid Kapoor Birthday: ಈ ಬಾಲಿವುಡ್ ಹೀರೊ ಒಟ್ಟು ಆಸ್ತಿ ಎಷ್ಟು ಗೊತ್ತಾ?

ಶಾಹಿದ್ ಕಪೂರ್ ಬಾಲಿವುಡ್ ನ ಬಹು ಬೇಡಿಕೆಯ ನಟರಲ್ಲಿ ಒಬ್ಬರು. ಇಂದು (ಫೆಬ್ರವರಿ 25) ಅವರ ಜನ್ಮದಿನ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಎರಡು ದಶಕಗಳಿಂದ...
- Advertisement -

More Articles Like This

- Advertisement -
error: Content is protected !!
Join WhatsApp Group