spot_img
spot_img

ಅರಭಾವಿ ಮತಕ್ಷೇತ್ರದ ಕಲ್ಲೋಳಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ

Must Read

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯದ ಬೃಹತ್ ಸಮಾವೇಶ ಶುಕ್ರವಾರ ಅ. 07 ರಂದು ಮಧ್ಯಾಹ್ನ 03.00 ಗಂಟೆಗೆ ಕೂಡಲ ಸಂಗಮ ಧರ್ಮಕ್ಷೇತ್ರದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಪ್ರಥಮ ಜಗದ್ಗುರು ಬಸವಜಯ ಮೃಂತ್ಯುಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯಲಿದೆ.

ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾಗತ ಸಮಿತಿ ಅಧ್ಯಕ್ಷ, ಹಾಲಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್, ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾಗತ ಸಮಿತಿ ಗೌರವಾಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ, ಅ.ಭಾ.ಲಿಂ.ಪಂಚಮಸಾಲಿ ಮಹಾಸಭಾ ಕೂಡಲಸಂಗಮ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನ್ನವರ, ಕೋಶಾಧ್ಯಕ್ಷ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ, ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಚ್ ಎಸ್ ಶಿವಶಂಕರ, ಮಾಜಿ ಸಚಿವ ವಿನಯ ಕುಲಕರ್ಣಿ, ಎ.ಬಿ ಪಾಟೀಲ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ, ಶಾಸಕ ಮಹಾಂತೇಶ ದೊಡ್ಡಗೌಡರ, ಗಣೇಶ ಹುಕ್ಕೇರಿ, ಮಹೇಶ ಕುಮಟಳ್ಳಿ, ಮಾಜಿ ಶಾಸಕ ರಾಜು ಕಾಗೆ, ಶಶಿಕಾಂತ ನಾಯಕ್, ರಾಜ್ಯ ಪಂಚಮಸಾಲಿ ರೈತ ಘಟಕ ಅಧ್ಯಕ್ಷ ಅಮರೇಶ ನಾಗೂರ, ಅ.ಭಾ.ಲಿಂ.ಪಂಚಮಸಾಲಿ ಮಹಾಸಭಾ ಬೆಳಗಾವಿ ಘಟಕ ಜಿಲ್ಲಾಧ್ಯಕ್ಷ ಆರ್. ಕೆ. ಪಾಟೀಲ, ರಾಜ್ಯ ಸಾಮಾಜಿಕ ಜಾಲತಾಣ ಅಧ್ಯಕ್ಷ ದೀಪಕ್ ಜುಂಜರವಾಡ, ಮೂಡಲಗಿ ತಾಲೂಕಾ ಯುವ ಘಟಕ ಅಧ್ಯಕ್ಷ ಸಂಗಮೇಶ ಕೌಜಲಗಿ ಮೀಸಲಾತಿ ಹೋರಾಟ ಸಮಿತಿ ತಾಲೂಕಾ ಅಧ್ಯಕ್ಷ ಮಲ್ಲು ಗೋಡಿಗೌಡರ, ತಾಲೂಕಾ ಘಟಕ ಮೂಡಲಗಿ ಅಧ್ಯಕ್ಷ ಬಸಗೌಡ ಪಾಟೀಲ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಾರ್ಯಾಧ್ಯಕ್ಷ ನಿಂಗಪ್ಪ ಪಿರೋಜಿ ತಿಳಿಸಿದ್ದಾರೆ.

- Advertisement -
- Advertisement -

Latest News

ಜಲಜೀವನ ಮಿಷನ್ ಪ್ರಚಾರ ವಾಹನಕ್ಕೆ ಚಾಲನೆ

ಬೈಲಹೊಂಗಲ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಮನೆಗೆ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು ಜಲಜೀವನ ಮಿಷನ್ ಯೋಜನೆ ಕುರಿತು ಆಟೋ ಪ್ರಚಾರ...
- Advertisement -

More Articles Like This

- Advertisement -
close
error: Content is protected !!