spot_img
spot_img

ಹುಯಿಲಗೋಳ ನಾರಾಯಣರಾಯರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

Must Read

- Advertisement -

ಹುಯಿಲಗೋಳ ನಾರಾಯಣರಾಯರು (೧೮೮೪-೧೯೭೧) – ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಕರ್ನಾಟಕ ನಾಡಗೀತೆಯೆನಿಸಿದ್ದ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಗೀತೆಯನ್ನು ರಚಿಸಿದವರು.

೧೮೮೪ ಅಕ್ಟೋಬರ್ ೪ ರಂದು ಜನಿಸಿದರು. ಇವರ ತಂದೆ ಕೃಷ್ಣರಾವ್, ತಾಯಿ ಬಹಿಣಕ್ಕ. ಬಾಲ್ಯದ ಶಿಕ್ಷಣವನ್ನು ಗದಗ, ಗೋಕಾಕ ಹಾಗು ಧಾರವಾಡಗಳಲ್ಲಿ ಪೂರೈಸಿದರು. ೧೯೦೨ ರಲ್ಲಿ ಧಾರವಾಡದಲ್ಲಿ ಮೆಟ್ರಿಕ್ ಪರೀಕ್ಷೆಯನ್ನು ಮುಗಿಸಿ ಉಚ್ಚ ಶಿಕ್ಷಣಕ್ಕಾಗಿ ಪುಣೆಯ ಫರ್ಗ್ಯೂಸನ್ ಕಾಲೇಜನ್ನು ಸೇರಿದರು. ೧೯೦೭ ರಲ್ಲಿ ಪದವಿಯನ್ನು ಪಡೆದ ಬಳಿಕ ಧಾರವಾಡದ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ಶಿಕ್ಷಕರಾದರು. ಕೆಲಕಾಲದ ನಂತರ ಶಿಕ್ಷಕ ವೃತ್ತಿಯನ್ನು ತ್ಯಜಿಸಿ ಮುಂಬೈಗೆ ತೆರಳಿ ಕಾನೂನು ಪದವಿಯನ್ನು ಪಡೆದು ೧೯೧೧ರಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಿದರು.

ನಾರಾಯಣರಾಯರು ಮೂಲತಃ ನಾಟಕಕಾರರು. ಕನ್ನಡ ರಂಗಭೂಮಿಗಾಗಿ ಕಾಲ್ಪನಿಕ, ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಹೀಗೆ ವಿವಿಧ ಬಗೆಯ ನಾಟಕಗಳನ್ನು ರಚಿಸಿ ಪ್ರದರ್ಶಿಸಿದರು. ಇವರ ಅನೇಕ ಕವನಗಳು ಅಂದಿನ ಪತ್ರಿಕೆಗಳಾದ ಜೈ ಕರ್ನಾಟಕ ವೃತ್ತ , ಪ್ರಭಾತ , ಧನಂಜಯ ಮೊದಲಾದವುಗಳಲ್ಲಿ ಪ್ರಕಟವಾಗಿವೆ.

- Advertisement -

ನಾರಾಯಣರಾಯರು ತಮ್ಮ ನಾಟಕಗಳಿಗಾಗಿ ಗೀತೆಗಳನ್ನು ರಚಿಸಿದ್ದರು. ನಾರಾಯಣರಾಯರು ‘ಮೂಡಲು ಹರಿಯಿತು’ ಎಂಬ ಕಾದಂಬರಿಯನ್ನೂ ಬರೆದಿದ್ದರೆಂದು ತಿಳಿದು ಬಂದಿದೆ. ಆದರೆ ಈ ಕಾದಂಬರಿಯ ಹಸ್ತಪ್ರತಿ ಈಗ ಲಭ್ಯವಿಲ್ಲ.

ನಾಟಕಗಳು:

ಹುಯಿಲಗೋಳ ನಾರಾಯಣರು ಐತಿಹಾಸಿಕ, ಪೌರಾಣಿಕ, ಸಾಮಾಜಿಕ, ಕಾಲ್ಪನಿಕ ನಾಟಕಗಳನ್ನು ರಚಿಸಿದ್ದಾರೆ. ಅವುಗಳ ಪಟ್ಟಿ ಕೆಳಕಂಡಂತಿವೆ.

  • ವಜ್ರಮುಕುಟ (೧೯೧೦)
  • ಕನಕವಿಲಾಸ (೧೯೧೩)
  • ಪ್ರೇಮಾರ್ಜುನ(೧೯೧೨)
  • ಮೋಹಹರಿ(೧೯೧೪)
  • ಅಜ್ಞಾತವಾಸ(೧೯೧೫)
  • ಪ್ರೇಮವಿಜಯ(೧೯೧೬)
  • ಸಂಗೀತ ಕುಮಾರರಾಮ ಚರಿತ(೧೯೧೭)
  • ವಿದ್ಯಾರಣ್ಯ(೧೯೨೧)
  • ಭಾರತಸಂಧಾನ(೧೯೧೮)
  • ಉತ್ತರ ಗೋಗ್ರಹಣ(೧೯೨೨)
  • ಸ್ತ್ರೀಧರ್ಮರಹಸ್ಯ(೧೯೧೯)
  • ಶಿಕ್ಷಣಸಂಭ್ರಮ(೧೯೨೦)
  • ಪತಿತೋದ್ಧಾರ(೧೯೫೨)

೧೯೫೪ರಲ್ಲಿ ಇವರ “ ಪತಿತೋದ್ಧಾರ” ನಾಟಕಕ್ಕೆ ಮುಂಬಯಿ ಸರಕಾರದ ಬಹುಮಾನ ದೊರೆಯಿತು. ನಾರಾಯಣರಾಯರ ಸಂಗಡಿಗರು ಅಥವಾ ನಾಟ್ಯವಿಲಾಸಿಗಳು ಆಡಿದ ಇವರ ನಾಟಕಗಳ ಸಂಪಾದನೆಯನ್ನು ಸಮಾಜಶಿಕ್ಷಣ ಮತ್ತು ಸುಧಾರಣೆಗೆ ವಿನಿಯೋಗಿಸಲು ಇವರು ಉದ್ದೇಶಿಸಿದ್ದರು. ಅದರಂತೆ ಗದಗಿನಲ್ಲಿ ವಿಧ್ಯಾದಾನ ಸಮಿತಿ ಯಿಂದ ಪ್ರೌಢಶಾಲೆಯೊಂದು ನಿರ್ಮಾಣವಾಯಿತು.

- Advertisement -

ನಾರಾಯಣರಾಯರು ಅನೇಕ ಸಾಮಾಜಿಕ ಸಂಘಟನೆಗಳಲ್ಲಿಯೂ ಸೇವೆ ಸಲ್ಲಿಸಿದ್ದರು.

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹುಯಿಲಗೋಳ ನಾರಾಯಣರು ರಚಿಸಿದ ಗೀತೆ ಕರ್ನಾಟಕ ರಾಜ್ಯದ ನಾಡಗೀತೆಯೆಂದು ಖ್ಯಾತಿ ಪಡೆದಿತ್ತು. ಈ ಗೀತೆಯನ್ನು ಬೆಳಗಾವಿಯಲ್ಲಿ ಜರುಗಿದ, ೧೯೨೪ರ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಗಿತ್ತು. ಮಹಾತ್ಮ ಗಾಂಧಿಯವರು ಈ ಅಧಿವೇಶನದ ಅಧ್ಯಕ್ಷರಾಗಿದ್ದರು. ಈ ಗೀತೆಯನ್ನು ೧೯೨೪ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತಗೀತೆಯಾಗಿ ಹಾಡಲಾಗಿತ್ತು. ಆಗಿನ್ನೂ ಬಾಲಕಿಯಾಗಿದ್ದ ಪದ್ಮಭೂಷಣ ಪ್ರಶಸ್ತಿ ಗಳಿಸಿದ್ದ ಗಂಗೂಬಾಯಿ ಹಾನಗಲ್ ಈ ಗೀತೆಯನ್ನು ಅಂದು ಹಾಡಿದ್ದರು.


ಹೇಮಂತ ಚಿನ್ನು
ಕರ್ನಾಟಕ ಶಿಕ್ಷಕರ ಬಳಗ

- Advertisement -
- Advertisement -

Latest News

ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ನಿಧನ

ಹೊಸದೆಹಲಿ - ಭಾರತದ ೧೩ ನೇ ಪ್ರಧಾನ ಮಂತ್ರಿಯಾಗಿದ್ದ ಆರ್ಥಿಕ ತಜ್ಞ ಡಾ. ಮನಮೋಹನ ಸಿಂಗ್ ನಿಧನರಾಗಿದ್ದಾರೆ ೧೯೭೨ ರಲ್ಲಿ ಆರ್ಥಿಕ ಸಲಹೆಗಾರ,  ೧೯೭೬ ರಿಂದ ೧೯೮೦...
- Advertisement -

More Articles Like This

- Advertisement -
close
error: Content is protected !!
Join WhatsApp Group