spot_img
spot_img

ಮಾರ್ಚ 15 ರಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ

Must Read

spot_img
- Advertisement -

ಬೈಲಹೊಂಗಲ: ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಹಾಗೂ ಅಧಿಕಾರ ಸ್ವೀಕಾರ ಸಮಾರಂಭವನ್ನು ಮಂಗಳವಾರ ದಿನಾಂಕ 15 ರಂದು ಸಂಜೆ 5 ಗಂಟೆಗೆ ಪಟ್ಟಣದ ಶ್ರೀ ಶಿವಬಸವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೈಲಹೊಂಗಲದ ಮೂರುಸಾವಿರ ಮಠದ ಪರಮಪೂಜ್ಯ ಶ್ರೀ ಮ.ನಿ.ಪ್ರ.ಸ್ವ . ಪ್ರಭುನೀಲಕಂಠ ಮಹಾಸ್ವಾಮಿಗಳು ವಹಿಸಲಿದ್ದು ಬೈಲಹೊಂಗಲ ಶಾಸಕರಾದ ಮಹಾಂತೇಶ ಎಸ್.ಕೌಜಲಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಲಿದ್ದಾರೆ.

ಕಿತ್ತೂರು ಶಾಸಕರಾದ ಮಹಾಂತೇಶ ದೊಡಗೌಡರ, ಮಾಜಿ ಶಾಸಕರು, ಮಲಪ್ರಭಾ-ಘಟಪ್ರಭಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ( ಕಾಡಾ) ಅಧ್ಯಕ್ಷರಾದ ಡಾ. ವಿಶ್ವನಾಥ ಆಯ್.ಪಾಟೀಲ, ಧಾರವಾಡ ರಂಗಾಯಣದ ನಿರ್ದೇಶಕರಾದ ರಮೇಶ ಎಸ್. ಪರವಿನಾಯ್ಕರ, ಬೈಲಹೊಂಗಲ ಉಪವಿಭಾಗಾಧಿಕಾರಿಗಳಾದ ಶಶಿಧರ್ ಬಗಲಿ, ತಹಶೀಲ್ದಾರರಾದ ಬಸವರಾಜ ನಾಗರಾಳ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಭಾಷ ಸಂಪಗಾವಿ, ಖ್ಯಾತ ಚಲನಚಿತ್ರ ನಟ- ನಿರ್ಮಾಪಕರಾದ ಶಿವರಂಜನ ಬೋಳಣ್ಣವರ, ದೂರದರ್ಶನ- ಆಕಾಶವಾಣಿ ಹಾಗೂ ರಂಗಭೂಮಿ ಕಲಾವಿದರಾದ ಸಿ.ಕೆ.ಮೆಕ್ಕೇದ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ ಹೋಟಿ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹಾಂತೇಶ ಎಸ್.ತುರಮರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಕೋಶಾಧ್ಯಕ್ಷರಾದ ಎಸ್.ಡಿ.ಗಂಗಣ್ಣವರ, ತಾಲ್ಲೂಕಾ ಘಟಕದ ಮಾಜಿ ಅಧ್ಯಕ್ಷರಾದ ಬಸವರಾಜ ಕೆ. ತಲ್ಲೂರ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಡಿ ನಂದೆಣ್ಣವರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಕಾರ್ಯಕಾರಿ ಸಮಿತಿ ಎಲ್ಲ ಸದಸ್ಯರುಗಳು, ಸಾಹಿತಿಗಳು, ಕಲಾವಿದರು ಹಾಗೂ ಕನ್ನಡ ಪ್ರೇಮಿಗಳು, ಸಾಹಿತ್ಯಾಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಸಾಪ ಬೈಲಹೊಂಗಲ ತಾಲ್ಲೂಕಾ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಲೇಖನ : ಗೆಲುವು ಸೋತವರ ಪಾಲಿಗೆ!

  ನಾವಿಂದು ಬದುಕುತ್ತಿರುವ ಆಧುನಿಕ ಜೀವನದ ಮೇಲೆ ನಂಬಲಾಗದ ಪ್ರಭಾವ ಬೀರಿದ ಕೊಡುಗೆ ನೀಡಿದವರು ಅನೇಕರು. ಅದರಲ್ಲೂ ತಮ್ಮ ಮಹತ್ವದ ಕೊಡುಗೆ ನೀಡಿದವರು ಥಾಮಸ್ ಅಲ್ವಾ...
- Advertisement -

More Articles Like This

- Advertisement -
close
error: Content is protected !!
Join WhatsApp Group