ಮೂಡಲಗಿ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2022-23ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಇದೇ ಸೆ.21 ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿ ಜಿಲ್ಲೆ, ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ಜರುಗಲಿದೆ.
ಈ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿ ಪಂದ್ಯಾವಳಿಗಳು ಜರುಗಲಿದ್ದು, 7 ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕಾರವಾರ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರದಿಂದ ಮಹಿಳಾ ಹಾಗೂ ಪುರುಷ ಕಬಡ್ಡಿ ಕ್ರೀಡಾಪಟುಗಳ ತಂಡ ಆಗಮಿಸಲಿದ್ದು, ಹೆಚ್ಚಿನ ಹೆಚ್ಚಿನ ಮಾಹಿತಿಗಾಗಿ ಸಂಘಟಕರಾದ ಬಸವರಾಜ ಜಕ್ಕಣ್ಣವರ 7411144485 ವರನ್ನು, ಸಂರ್ಪಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರಾದ ಜಿನೇಶ್ವರ ಪಡನಾಡ ತಿಳಿಸಿದ್ದಾರೆ.