spot_img
spot_img

ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ಪಠ್ಯಪೂರಕ ಚಟುವಟಿಕೆ ಉದ್ಘಾಟನೆ

Must Read

ಸಿಂದಗಿ: ಬದುಕಿನ ಮೌಲ್ಯ ಅರಿಯುವಲ್ಲಿ, ಬೌದ್ಧಿಕ ಮತ್ತು ಕಲಾತ್ಮಕ ವ್ಯಕ್ತಿತ್ವ ಬೆಳೆಸುವಲ್ಲಿ, ಸಹಕಾರ, ಸಮಾನತೆ, ಸಹಬಾಳ್ವೆ ಪಸರಿಸುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಕಾರಣವಾಗಿವೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯ ಮತ್ತು ಪಠ್ಯಪೂರಕ ಚಟುವಟಿಕೆಗಳೆರಡು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿಯೇ  ಶೈಕ್ಷಣಿಕವಾಗಿ ಪಠ್ಯಪೂರಕವು ಅವಿಭಾಜ್ಯ ಅಂಗವಾಗಿ ಇರಿಸಲಾಗಿದೆ ಎಂದು ಆರ್. ಡಿ ಪಾಟೀಲ್ ಪಪೂ ಕಾಲೇಜಿನ ಪ್ರಾಚಾರ್ಯ ವಿ. ವಿ. ಜಿರಲೇ ಹೇಳಿದರು.

ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಸನ್ಮಾನ  ಸಮಾರಂಭದಲ್ಲಿ ಮಾತನಾಡಿ, ಪಠ್ಯಪೂರಕ ಚಟುವಟಿಕೆ ಎಂದರೆ ಕೇವಲ ಪಠ್ಯವಾಗಿರದೆ ಪಠ್ಯೇತರ ಕಾರ್ಯಗಳಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡರೆ ಮಹಾವಿದ್ಯಾಲಯದ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದರು.

ಸಾನ್ನಿಧ್ಯ ವಹಿಸಿದ್ದ  ಪರಮ ಪೂಜ್ಯ ಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ವಿದ್ಯಾರ್ಥಿಗಳು ಎಂದೊಡನೆ ಪ್ರತಿಯೊಬ್ಬರ ಮನಸ್ಸಿನಲ್ಲಿ ಮೂಡುವುದು ಶಿಸ್ತು ಎಂಬ ಕಲ್ಪನೆ. ವಿದ್ಯಾರ್ಥಿ ಎಂಬ ಪದಕ್ಕೆ ಇನ್ನೊಂದು ಅರ್ಥವೇ ಶಿಸ್ತು.  ಆದ್ದರಿಂದಲೇ ಮನೆಯಲ್ಲಿಯೂ ಸಹ ಮಕ್ಕಳಿಗೆ ತಮ್ಮ ಹಿರಿಯರಿಂದ ಶಿಸ್ತನ್ನು ಮೈಗೂಡಿಸಿಕೊಳ್ಳುವ ಕುರಿತು ನೀತಿ-ಬೋಧನೆ ಸಾಗುತ್ತಲೇ ಇರುತ್ತದೆ. ಯಾವ ವಿದ್ಯಾರ್ಥಿಗಳು ತಮ್ಮ ಓದಿನಲ್ಲಿ, ಆಟದಲ್ಲಿ, ಶಾಲಾ ಕಾಲೇಜಿನ ಚಟುವಟಿಕೆಗಳಲ್ಲಿ, ಮನೆಯ ಕೆಲಸ-ಕಾರ್ಯಗಳಲ್ಲಿ ಆಸಕ್ತಿಯ ಜೊತೆಗೆ ಶಿಸ್ತನ್ನು ಅಳವಡಿಸಿಕೊಂಡಿರುತ್ತಾರೋ ಅಂತಹ ವಿದ್ಯಾರ್ಥಿಗಳು ತಮ್ಮ ಜೀವನದ ಪ್ರಮುಖ ಘಟ್ಟವನ್ನು ತಲುಪಲು ಸಾಧ್ಯುವಾಗುತ್ತದೆ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎಂ.ಎಸ್.ಹೈಯಾಳಕರ ಮಾತನಾಡಿ, ವಿದ್ಯಾರ್ಥಿಗಳ ಒಕ್ಕೂಟಕ್ಕೆ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ಕಾರ್ಯಗಳನ್ನು ಕಾಯಾ ವಾಚಾ ಮನಸಾ ಪೂರ್ವಕವಾಗಿ ಮಾಡಬೇಕಾಗುತ್ತದೆ. ಪ್ರತಿಯೊಂದು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಬಹಳ ಮುಖ್ಯವಾಗಿರುತ್ತದೆ. ಅಕ್ಕ ತಂಗಿಯರ ಧ್ವನಿ ರೊಕ್ಕ ಬಾರಿಸಿದಂಗ ಎನ್ನುವ ನಾಣ್ಮುಡಿಯಂತೆ ಎಲ್ಲಿ ಕೆಲಸವಿರುತ್ತದೆಯೋ ಅಲ್ಲಿ ಕಾರ್ಯ ಮಾಡಿ ಕಾಯಕವೇ ಕೈಲಾಸ ಎಂಬ ಮನೋಭಾವವನ್ನು ನಮ್ಮಲ್ಲಿ ರೂಢಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕಾಲೇಜಿಗೆ ಅತ್ಯುತ್ತಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.

ನೀಲಾಂಬರಿ ಬಬಲೇಶ್ವರ ನಿರೂಪಿಸಿದರು, ಉಪನ್ಯಾಸಕಿ ಹೇಮಾ ಹಿರೇಮಠ ಸ್ವಾಗತಿಸಿದರು. ಸರಸ್ವತಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಸಂಗೀತಾ ಪೂಜಾರಿ ವಂದಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!