- Advertisement -
ಸಿಂದಗಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ಉದ್ಘಾಟನೆಯನ್ನು ‘ ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ’ ಎಂಬ ಶೀರ್ಷಿಕೆಯಡಿಯಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಹಾಗೂ ಶಿಶು ಕಲ್ಯಾಣ ಅಭಿವೃದ್ಧಿ ಯೋಜನೆ ಮತ್ತು ಪುರಸಭೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಆ. 30ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಅವರು ರಾಜ್ಯ ಸರ್ಕಾರದ ಈ ಯೋಜನೆಯನ್ನು ಅನುಷ್ಠಾನಗೊಳಿಸುವುದರ ಮೂಲಕ ಮಹಿಳಾ ಸ್ವಾವಲಂಬನೆಯನ್ನು ರೂಪಿಸುತ್ತಿದೆ. ಕಾರ್ಯಕ್ರಮದಲ್ಲಿ ಸಚಿವರು, ಜಿಲ್ಲೆಯ ಶಾಸಕರು, ಸಂಸದರು ಮತ್ತು ಜನಪ್ರತಿನಿಧಿಗಳು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಿಂದಗಿ ಮತಕ್ಷೇತ್ರದ ಫಲಾನುಭವಿಗಳು ಹಾಗೂ ಮಹಿಳೆಯರು ಮತ್ತು ಮುಖಂಡರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.