Homeಸುದ್ದಿಗಳುಕಸಾಪ ಬೆಳಗಾವಿ ತಾಲೂಕಾ ಘಟಕದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ

ಕಸಾಪ ಬೆಳಗಾವಿ ತಾಲೂಕಾ ಘಟಕದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ

ಬೆಳಗಾವಿ – ರವಿವಾರ ದಿ.13 ರಂದು ಬೆಳಗಾವಿಯ ನೆಹರೂ ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ತಾಲೂಕಾ ಘಟಕದ ಉದ್ಘಾಟನಾ ಸಮಾರಂಭ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಜರುಗಲಿದೆ. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ನಾಗನೂರು ಶ್ರೀ ರುದ್ರಾಕ್ಷಿಮಠದ ಶ್ರೀ ಮ. ನಿ. ಪ್ರ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಲಿದ್ದು ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳಗಾವಿ ಉತ್ತರ ಶಾಸಕರಾದ ಅನಿಲ ಬೆನಕೆ, ಬೆಳಗಾವಿ ದಕ್ಷಿಣ ಶಾಸಕರಾದ ಅಭಯ ಪಾಟೀಲ, ಯಮಕನಮರಡಿ ಕ್ಷೇತ್ರದ ಶಾಸಕರಾದ ಸತೀಶ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸಾಹಿತಿಗಳಾದ ಪಿಜಿ ಕೆಂಪನ್ನವರ, ಆಶಾ ಕಡಪಟ್ಟಿ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜೇಶ ಧಾರವಾಡಕರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಪಿ. ಜುಟ್ಟನವರ, ರವಿ ಭಜಂತ್ರಿ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಗದೀಶ ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ ದೇಯಣ್ಣವರ ಸೇರಿದಂತೆ ಕನ್ನಡಪರ ಸಂಘಟನೆಗಳ ಮುಖಂಡರಾದ ಮಹಾದೇವ ತಳವಾರ, ದೀಪಕ ಗುಡಗನಟ್ಟಿ, ಮಹಾಂತೇಶ ರಣಗಟ್ಟಿಮಠ, ಅಭಿಲಾಶ, ರಾಜು ನಾಶಿಪುಡಿ ಸೇರಿದಂತೆ ಹಿರಿಯ ಸಾಹಿತ್ಯಾಸಕ್ತರು ಕನ್ನಡ ಅಭಿಮಾನಿಗಳು ಆಗಮಿಸಲಿದ್ದಾರೆ ಎಂದು ಕಾರ್ಯದರ್ಶಿಗಳಾದ ಎನ್.ಬಿ. ಕರವಿನಕೊಪ್ಪ ಮತ್ತು ರಮೇಶ ಬಾಗೇವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group