- Advertisement -
ಮೂಡಲಗಿ: ತಾಲೂಕಿನ ನಲ್ಲಾನಟ್ಟಿ ವಲಯದ ಉದಗಟ್ಟಿ ಕಾರ್ಯಕ್ಷೇತ್ರದಲ್ಲಿ ಈ ದಿನ ಉದ್ದಮ್ಮಾದೇವಿ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅಥಣಿ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀಮತಿ ನಾಗರತ್ನ ಹೆಗಡೆ ಇವರು ಜ್ಞಾನ ವಿಕಾಸ ಕೇಂದ್ರದ ಮಹತ್ವ, ಉದ್ದೇಶ, ಜ್ಞಾನವಿಕಾಸ ಕೇಂದ್ರದ ಶಿಸ್ತು ಕೇಂದ್ರದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಗಳ ಬಗ್ಗೆ ಹಾಗೂ ಯೋಜನೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಪ್ರತಿಯೊಬ್ಬ ಮಹಿಳೆಯರು ಸ್ವಾವಲಂಬನೆ ಜೀವನ ನಡೆಸುವುದರ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.
ಈ ಕಾರ್ಯಕ್ರಮದಲ್ಲಿ ಸಮುದಾಯ ಕೇಂದ್ರದ ಅಧ್ಯಕ್ಷರಾದ ಮಲ್ಲಿಕಾರ್ಜುನ ವಡ್ಡರ, ಉಪಾಧ್ಯಕ್ಷರಾದ ಕಲ್ಲಪ್ಪ ಹಿಪ್ಪಗೇರಿ ಗ್ರಾಮ ಪಂಚಾಯತ್ ಸದಸ್ಯರಾದ ಮುತ್ತಪ್ಪ ನಾಯಕ, ವಲಯದ ಮೇಲ್ವಿಚಾರಕರು ಜ್ಞಾನವಿಕಾಸ ಸಮನ್ವಯಾಧಿಕಾರಿಗಳು ಸೇವಾ ಪ್ರತಿನಿಧಿಗಳು ಕೇಂದ್ರದ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.