spot_img
spot_img

ಮಹಿಳಾ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Must Read

- Advertisement -

ಮೂಡಲಗಿ ತಾಲೂಕಿನ ಹುಣಶ್ಯಾಳ ವಲಯದ  ಸಂಗನಕೇರಿ ಕಾರ್ಯಕೇತ್ರದ ರೇವಣಸಿದ್ದೇಶ್ವರ ಮಹಿಳಾ ಜ್ಞಾನವಿಕಾಸ ಕೇಂದ್ರದ ಕೇಂದ್ರದ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಅರಭಾವಿ ಪಟ್ಟಣ ಪಂಚಾಯತಿ ಸದಸ್ಯರಾದ ರಮೇಶ ಸಂಪಗಾವಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಧರ್ಮಸ್ಥಳ ಯೋಜನೆಯಿಂದ ಮಹಿಳೆಯರಿಗಾಗಿ ಪ್ರತಿಯೊಂದು ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟಕ್ಕೆ ತಲುಪಿಸುವ ಯೋಜನೆಯಾಗಿದ್ದು ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು ಸಹಕಾರಿಯಾಗಿದೆ ಇದರ ಸಫಲತೆ ಪಡೆದುಕೊಂಡು ಉತ್ತಮ ಮಹಿಳೆಯಾಗಿ ಬೆಳೆಯಬೇಕು ಎಂದು ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಸಪ್ಪ ಕೋಳಿ ಗ್ರಾಮ ಪಂಚಾಯತ್ ಸದಸ್ಯರು, ಜಯಶ್ರೀ ಬೋಸಲೇ ಕನ್ನಡ ಪ್ರಾಥಮಿಕ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದು ತಾಲೂಕು  ವಿಚಕ್ಷಣೆ ಅಧಿಕಾರಿಗಳಾದ ರಾಮು ಅವರು ಕೇಂದ್ರದ ಹಾಜರಾತಿ ಗುಣಮಟ್ಟ ಬಗ್ಗೆ ಮಾಹಿತಿ ನೀಡಿ ಕೇಂದ್ರದ ಆಡಿಟ್ ಮಾಡಿದರು.

- Advertisement -

ಈ ಕಾರ್ಯಕ್ರಮದಲ್ಲಿ  ಜ್ಞಾನವಿಕಾಸ ಸಮನ್ವಯಾಧಿಕಾರಿಗಳು ಶ್ರದ್ಧಾ ಮಂಜುನಾಥ್ ಕಮ್ಮಾರ ವಲಯದ ಮೇಲ್ವಿಚಾರಕರು ಮಂಜುಳಾ  ಸೇವಾಪ್ರತಿನಿಧಿಗಳು ದೀಪಾ, ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ರೇವಣಸಿದ್ದಯ್ಯನವರ ಪುಣ್ಯಸ್ತ್ರೀ ರೇಕಮ್ಮ ಹನ್ನೆರಡನೇ ಶತಮಾನ ಎಂಬುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವ ಬಹುಮುಖ್ಯ ಕಾಲಘಟ್ಟ. ಶರಣರು ರಚಿಸಿದ ವಚನಗಳನ್ನು ಕನ್ನಡ ಸಾಹಿತ್ಯದ ಉಪನಿಷತ್ತುಗಳು ಎಂದು...
- Advertisement -

More Articles Like This

- Advertisement -
close
error: Content is protected !!
Join WhatsApp Group