ಎಸ್.ಎಸ್.ಆರ್ ಕಾಲೇಜಿ ಎನ್‍ಎಸ್‍ಎಸ್ ವಿಶೇಷ ವಾರ್ಷಿಕ ಶಿಬಿರ ಉದ್ಘಾಟನೆ

Must Read

ಮೂಡಲಗಿ: ವಿದ್ಯಾರ್ಥಿಯ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ವಿಕಾಸಗೊಳಿಸುವುದೇ ಎನ್.ಎಸ್.ಎಸ್ ಶಿಬಿರದ ಮೂಲ ಉದ್ದೇಶವಾಗಿದೆ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಎನ್.ಎಸ್.ಎಸ್ ಶಿಬಿರಾರ್ಥಿಗಳಿಗೆ ಕರೆ ನೀಡಿದರು

ಅವರು ದತ್ತು ಗ್ರಾಮ ಕಮಲದಿನ್ನಿ  ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಹಮ್ಮಿಕೊಂಡ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ  ಮಾತನಾಡಿ, ಶಿಬಿರಾರ್ಥಿಗಳು ಶಿಬಿರದಲ್ಲಿ ತಮ್ಮನು ತಾವು ತೊಡಗಿಕೊಂಡು ಉತ್ತಮ ಕೆಲಸ ಕಾರ್ಯಗಳನ್ನು ಮಾಡುವುದರಿಂದ ಸಮಾಜ ಗುರುತಿಸುತ್ತದೆ, ಭಾರತ ದೇಶ ಶರಣರ, ದಾರ್ಶನಿಕರ, ಮೇಧಾವಿಗಳ, ಸಾಂಪ್ರದಾಯಿಕ ದೇಶ ತಾವು ಕೂಡಾ ಉನ್ನತ ಸ್ಥಾನ ಅಲಂಕರಿಸುವತ್ತ ಗುರಿಇಟ್ಟುಕೊಂಡರೆ ಸಾಧ್ಯವಾಗುತ್ತದೆ ಎಂದ ಅವರು ಕಳೆದ ಮೂವತ್ತು ಮೂರು ವರ್ಷಗಳ ಹಿಂದೆ ಇದೇ ಕಾಲೇಜಿನ ಎನ್.ಎಸ್.ಎಸ್. ಶಿಬಿರಾರ್ಥಿಯಾಗಿ  ಕಮಲದಿನ್ನಿ ಗ್ರಾಮದ ಇದೇ ಸ್ಥಳದಲ್ಲಿ ಭಾಗಿಯಾಗಿರುವ ಅನುಭವವನ್ನು ಹಂಚಿಕೊಂಡರು. 

ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ನಿವೃತ್ತ ಉಪನ್ಯಾಸಕ ಸುರೇಶ ನಾಯಕ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು, ಸ್ವಚ್ಛತೆಗಾಗಿ ಯುವಕರ ಪಾತ್ರ ಬಹಳ ಮುಖ್ಯ, ಗಾಂಧಿಜಿಯವರು ಅಹಿಂಸೆಯಿಂದ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ. ಯುವಕರಿಂದಲೇ ದೇಶದ ಅಭಿವೃದ್ಧಿ, ಅಗತ್ಯವಾದ ಉತ್ತಮ ಸಂಸ್ಕಾರ ಹಾಗೂ ಒಳ್ಳೆಯ ಮಾರ್ಗದರ್ಶನ ಇಂಥ ಶಿಬಿರದಿಂದ ದೊರೆಯಲು ಸಾಧ್ಯ ಎಂದರು. 

ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಪ್ರೊ. ಜಿ.ವಿನಾಗರಾಜ ಮಾತನಾಡಿ, ಎನ್.ಎಸ್.ಎಸ್ ಶಿಬಿರದಲ್ಲಿ ಭಾಗಿಯಾಗುವದರಿಂದ ವ್ಯಕ್ತಿತ್ವ ವಿಕಾಸನಗೊಳ್ಳುವುದರೊಂದಿಗೆ ನಾಯಕತ್ವದ ಗುಣಗಳು ಬೆಳೆಯುತ್ತವೆ ಎಂದರು.

Latest News

ಕಾಂಗ್ರೆಸ್ ಶಾಸಕರ ಮಾತುಗಳು ಹೇಸಿಗೆ ತರಿಸುತ್ತವೆ – ಭಗವಂತ ಖೂಬಾ

ಬೀದರ - ಪ್ರಸಕ್ತ ಮುಖ್ಯಮಂತ್ರಿ ಗಳು, ಮಂತ್ರಿಗಳು, ಶಾಸಕರು ಸದನದಲ್ಲಿ ಆಡುವ ಭಾಷೆ ಹೇಸಿಗೆ ತರುವಂತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂಥಾ ಭಾಷೆಯನ್ನು ನೋಡಿಲ್ಲ. ಒಬ್ಬ...

More Articles Like This

error: Content is protected !!
Join WhatsApp Group