spot_img
spot_img

ಆ.29 ರಂದು ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ

Must Read

spot_img

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ 109 ವರ್ಷಗಳ ಪೂರೈಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಆ.29 ರಂದು ಸೋಮವಾರದಂದು ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗಲಿದೆ ಎಂದು ಸಂಘದ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ  ನೀಲಕಂಠ ಬಸವರಾಜ ಕಪ್ಪಲಗುದ್ದಿ ಹೇಳಿದರು.

ಅವರು ಶನಿವಾರದಂದು ಕಲ್ಲೋಳಿ ಪಟ್ಟಣದ ಸಂಘದ ಸಭಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾವನ ಸಾನ್ನಿಧ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು,  ದಿವ್ಯಸಾನ್ನಿಧ್ಯ ಅರಭಾವಿ ಪುಣ್ಯಾರಣ್ಯ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ,  ಇಂಚಲದ ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಗಳು, ಗೋಕಾಕ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು,  ಸುಣಧೋಳಿ ಜಡಿಸಿದ್ಧೇಶ್ವರ ಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳು ವಹಿಸುವರು, ಉದ್ಘಾಟಕರಾಗಿ ಕಹಾಮ ಅಧ್ಯಕ್ಷ ಹಾಗೂ ಶಾಸಕ  ಬಾಲಚಂದ್ರ ಲ ಜಾರಕಿಹೊಳಿ ಭಾಗವಹಿಸುವರು, ಸಂಘದ ಅಧ್ಯಕ್ಷ ಈರಪ್ಪ ಶಿ. ಹೆಬ್ಬಾಳ ಅಧ್ಯಕ್ಷತೆ ವಹಿಸುವರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಜ್ಯೋತಿ ಬೆಳಗಿಸುವವರು, ಮುಖ್ಯಅತಿಥಿಗಳಾಗಿ ಮಾಜಿ ಜಿ.ಪಂ  ಅಧ್ಯಕ್ಷ ಬಸಗೌಡ ಪಾಟೀಲ, ಪ.ಪಂ ಸದಸ್ಯರಾದ ಸುಭಾಷ ಕುರಬೇಟ, ಮಲ್ಲಪ್ಪ ಹೆಬ್ಬಾಳ, ಪ್ರಥಮ ದರ್ಜೆ ಗುತ್ತಿಗೆದಾರ ಬಸವಂತ ದಾಸವನವರ ಭಾಗವಹಿಸುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘ ಅಧ್ಯಕ್ಷ ಈರಪ್ಪ ಶಿ.ಹೆಬ್ಬಾಳ, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಬಸವರಾಜ  ಬಾಗೇವಾಡಿ  ಮತ್ತಿತರರು ಇದ್ದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!