ಗೋಕಾಕದಲ್ಲಿ ಆಕ್ಸಿಜನ್ ಘಟಕ ಉದ್ಘಾಟಿಸಿದ ಈರಣ್ಣ ಕಡಾಡಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಗೋಕಾಕ: ಕರೋನಾ ಸಂದರ್ಭದಲ್ಲಿಯ ಆಕ್ಸಿಜನ್ ಕೊರತೆಯನ್ನು ಗಮನಿಸಿ ಭಾರತದ ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ಪಿಎಂ ಕೇರ್ಸ್ ಅಡಿ ಸಾರ್ವಜನಿಕ ಉದ್ಯಮಿಗಳ ಮುಖಾಂತರ ಮೊದಲ ಹಂತದಲ್ಲಿ 1230 ಆಕ್ಸಿಜನ್ ಘಟಕಗಳನ್ನು ಇಂದು ಲೋರ್ಕಾಪಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಗುರುವಾರ ಅ.07 ರಂದು ನಗರದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮಂಗಳೂರಿನ ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಪಿಎಂ ಕೇರ್ಸ್ ಅಡಿ ನಿರ್ಮಿಸಿರುವ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಿರುವ ಆಕ್ಸಿಜನ್ ಘಟಕವು ಒಂದು ಕೋಟಿಗೂ ಹೆಚ್ಚು ಖರ್ಚಾಗಿದ್ದು, 500 ಎಲ್.ಪಿ.ಎಂ ಸಾಮರ್ಥ್ಯವನ್ನು ಹೊಂದಿದೆ ಎಂದರಲ್ಲದೆ ಸುಮಾರು 30 ರಿಂದ 50 ರೋಗಿಗಳಿಗೆ ಏಕಕಾಲದಲ್ಲಿ ಆಕ್ಸಿಜನ್ ಪೂರೈಕೆ ಮಾಡಬಹುದಾಗಿದೆ ಎಂದು ತಿಳಿಸಿದರು.

- Advertisement -

ಗೋಕಾಕ ತಾಲೂಕಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕದ ಮಂಜೂರಾತಿಗಾಗಿ ಸಹಕಾರ ನೀಡಿದ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರುಗಳನ್ನು ಅಭಿನಂದಿಸಿ ಕಡಾಡಿ ಅವರು ಘಟಕದ ಸ್ಥಾಪನೆಯಲ್ಲಿ ಮುತುವರ್ಜಿ ವಹಿಸಿದ ಮಂಗಳೂರಿನ ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕಾರ್ಯವನ್ನು ಕೂಡಾ ಮುಕ್ತ ಕಂಠದಿಂದ ಶ್ಲಾಘಿಸಿದರು.

ಗೋಕಾಕ ತಹಶೀಲ್ದಾರ್ ಪ್ರಕಾಶ್ ಹೋಳೆಪ್ಪಗೋಳ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ, ಡಾ. ಬೆನಚನಮರಡಿ ಡಾ. ಮಹೇಶ ಕೋಣಿ, ಡಾ. ಅಂಗಡಿ, ಗೋಕಾಕ ಮಂಡಳ ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೆಂದ್ರ ಗೌಡಪ್ಪನವರ, ಬಸವರಾಜ ಹುಳ್ಳೇರ, ವಿಜಯ ಜಂವರ, ಸಂತೋಷ ಹುಂಡೇಕರ, ಶಕೀಲ ಢಾರವಾಡಕರ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!