spot_img
spot_img

ಪ್ರಾಥಮಿಕ ಮತ್ತು ಪ್ರೌಢಶಾಲಾ ಬಿಸಿಯೂಟ ಕಾರ್ಯಕರ್ತೆಯರ ಕಾರ್ಯಾಗಾರ ಉದ್ಘಾಟನೆ

Must Read

ಮುಡಲಗಿ: ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದೊಂದಿಗೆ ಅನ್ನ ದಾನವು ಬಹು ಮುಖ್ಯ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿ ವಿದ್ಯಾರ್ಥಿಗಳಿಗೆ ತಾಯಿಗೆ ಸಮಾನ. ಮಕ್ಕಳಿಗೆ ಅಕ್ಷರ ಜ್ಞಾನ ನೀಡುವ ಜೊತೆಗೆ ಸರ್ಕಾರದ ಮಹತ್ವಾಕಾಂಕ್ಷೆಯ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಸಾರ್ಥಕತೆಯು ಅಡುಗೆ ಸಿಬ್ಬಂದಿಯ ಮಹತ್ತರ ಜವಾಬ್ದಾರಿಯಾಗಿದೆ ಎಂದು ಗೋಕಾಕ ತಾಲೂಕ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎ.ಬಿ.ಮಲಬನ್ನವರ ಹೇಳಿದರು.

ತಾಲೂಕಿನ ನಾಗನೂರ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ನಾಗನೂರ ಸಿ ಅರ್.ಸಿ ಮಟ್ಟದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಿಸಿಯೂಟ ಕಾರ್ಯಕರ್ತೆಯರ ಒಂದು ದಿನದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ನಾಗನೂರ ಕೆಂದ್ರ ಶಾಲೆಯ ಪ್ರಧಾನ ಗುರು ಬಿ.ಬಿ.ಸಸಾಲಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಅಕ್ಷರ ದಾಸೋಹ ಯೋಜನೆ ಮಹತ್ವದ ಸ್ಥಾನ ಪಡೆದಿದೆ. ಅದನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗುವುದು ಶಿಕ್ಷಕರ ಮತ್ತು ಬಿಸಿಯೂಟ ಕಾರ್ಯಕರ್ತೆಯರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯ ಬಿಸಿಯೂಟ ಕಾರ್ಯಕರ್ತೆಯರಾಗಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದರ ಮುತ್ತವ ಭಿಮಪ್ಪ ಬಡಗಾಂವಿ ಹಾಗೂ ಯಲ್ಲವ್ವ ಕಲ್ಲಪ್ಪ ಗಡದಿ ಇವರನ್ನು ಸತ್ಕರಿಸಲಾಯಿತು.

ನಾಗನೂರ ಸಿ.ಆರ್.ಸಿ ಯ ಸಿ.ಆರ್.ಪಿ ಗಳಾದ ಎಸ್.ಎಮ್.ಗೋಕಾಕ ಹಾಗೂ ವ್ಯಾಪ್ತಿಯ ಎಲ್ಲ ಸರಕಾರಿ ಮತ್ತು ಅನುದಾನಿತ ಶಾಲೆಗಳ ಪ್ರಧಾನ ಗುರುಗಳು ಭಾಗವಹಿಸಿದರು.
ಶಿಕ್ಷಕರಾದ ಶಿವಾನಂದ ಹಿರೇಮಠ ನಿರೂಪಿಸಿದರು, ಅಜೀತ ಐಹೊಳೆ ಸ್ವಾಗತಿಸಿದರು, ಮಾಳೇಶ ತಾಂದಳೆ ವಂದಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವಿ ನಾಗೇಶ್ ನಾಯಕಗೆ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ದತ್ತಿ ಪ್ರಶಸ್ತಿ ಪ್ರದಾನ

ಸವದತ್ತಿಃ ಸಮೀಪದ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಕವಿ, ಶಿಕ್ಷಕ ನಾಗೇಶ್ ಜೆ. ನಾಯಕ ಅವರಿಗೆ ಇತ್ತೀಚೆಗೆ ಬೆಳಗಾವಿ ಹಿಂದವಾಡಿಯ ಐ.ಎಂ.ಇ.ಆರ್. ಸಭಾಭವನದಲ್ಲಿ ಜರುಗಿದ ಬೆಳಗಾವಿ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!