ಆದಾಯ ತೆರಿಗೆ ವಂಚನೆ ಪ್ರಕರಣ ; ಡಿಕೆಶಿಗೆ ರಿಲೀಫ್

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೆಂಗಳೂರು– ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ವೇಳೆಗೆ ಸಾಕ್ಷ್ಯ ನಾಶಪಡಿಸಿದ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೋಮವಾರ ಬಿಗ್ ರಿಲೀಫ್ ಸಿಕ್ಕಿದ್ದು, ಅವರ ವಿರುದ್ದದ ಪ್ರಕರಣವನ್ನು ವಜಾಗೊಳಿಸಿ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪುನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ತೆರಿಗೆ ವಂಚನೆಗೆ ಸಂಬಂಧಿಸಿದ ಮೂರು ಪ್ರಕರಣಗಳನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಕೆಳ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ಮೂ. ಜಾನ್ ಮೈಕೆಲ್ ಕುನ್ಹಾ ಅವರು, ಈ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಕುಮಾರ್ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿದೆ.

ಡಿಕೆ ಶಿವಕುಮಾರ್ ಅವರಿಂದ ತೆರಿಗೆ ವಂಚನೆ ನಡೆದಿದೆ ಎಂದು ಆರೋಪಿಸಿದ್ದ ಐಟಿ ಇಲಾಖೆ ಅಧಿಕಾರಿಗಳು, ದಾಳಿ ನಡೆದಾಗ ಮಾಜಿ ಸಚಿವರು ಕಾಗದ ಪತ್ರಗಳನ್ನು ಹರಿದು ದಾಖಲೆ ನಾಶ ಮಾಡಿದ್ದಾರೆಂದು ಆರೋಪಿಸಿತ್ತು. ಅಲ್ಲದೆ ವಿಶೇಷ ನ್ಯಾಯಾಲಯ ತನ್ನ ವ್ಯಾಪ್ತಿ ಮೀರಿ ಆರೋಪಿ ಯನ್ನು ದೊಷಮುಕ್ತರಾಗಿ ಘೋಷಿಸಿದೆ ಎಂದು ದೂರಿತ್ತು.
ಹೈಕೋರ್ಟಿನ ಈ ತೀರ್ಪಿನಿಂದ ಡಿಕೆಶಿ ಅವರು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ. ಐಟಿ ಅಧಿಕಾರಿಗಳು ಸಲ್ಲಿಸಿರುವ ದೂರಿನ ಅನುಸಾರ 2015-16ರ ಅವಧಿಗೆ 3.14 ಕೋಟಿ ರೂ ತೆರಿಗೆ ವಂಚಿಸಲಾಗಿದೆ. 2016-17ರಲ್ಲಿ ಅಂದಾಜು 2.56 ಕೋಟಿ ರೂ. ಹಾಗೂ 2017-18ರ ಅಂದಾಜು 7.08 ಕೋಟಿ ರೂ. ತೆರಿಗೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿತ್ತು.

- Advertisement -
- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!