ಕಬ್ಬು ಬೆಳೆಯ ಎಫ್‌ಆರ್‌ಪಿ ಹೆಚ್ಚಳ; ಕೇಂದ್ರದ ಕ್ರಮ ಸ್ವಾಗತಾರ್ಹ-ಸಂಸದ ಈರಣ್ಣ ಕಡಾಡಿ

0
220

ಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2024ರ ಅಕ್ಟೋಂಬರ 1 ರಿಂದ 2025 ಸೆಪ್ಟಂಬರ್ 30ರ ಮುಂಬರುವ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ದರವನ್ನು ಪ್ರತಿ ಟನ್‌ಗೆ 250 ರೂ ಹೆಚ್ಚಳಕ್ಕೆ ಅನುಮೋದನೆ ನೀಡಿ ಕಬ್ಬು ಬೆಳೆಗಾರರಿಗೆ ಭರ್ಜರಿ ಉಡುಗೊರೆ ನೀಡಿದೆ ಎಂದು ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಬ್ಬಿಗೆ ಘೋಷಿಸಿದ ಅತ್ಯಧಿಕ ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆಯಾಗಿದೆ. 2014-15ನೇ ಸಾಲಿನಲ್ಲಿ ಪ್ರತಿ ಟನ್ ಗೆ 2100 ರೂ. ಇದ್ದ ಎಫ್‌ಆರ್‌ಪಿ ದರವನ್ನು 2024-25ನೇ ಸಾಲಿನಲ್ಲಿ ಟನ್ ಗೆ 3400 ರೂ.ಗೆ ಏರಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ 5 ಕೋಟಿಗೂ ಹೆಚ್ಚು ಕಬ್ಬು ಬೆಳಗಾರರಿಗೆ ಮತ್ತು ಸಕ್ಕರೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಲಕ್ಷಾಂತರ ಜನರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.