ಬೆಂಗಳೂರು : ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆರ್ ಜೆಡಿ ಮೈತ್ರಿಕೂಟ ಇಂಡಿ ಅಧಿಕಾರಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, ಸುದ್ದಿಗಾರರು ಕೇಳಿದ ಬಿಹಾರ ಚುನಾವಣೆಯ ಎಕ್ಸಿಟ್ ಪೋಲ್ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೊಲ್ ನಲ್ಲಿ ಹೇಳಲಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೇರಿತು. ಬಿಹಾರದಲ್ಲಿ ಎನ್ ಡಿಎ ಅಧಿಕಾರಕ್ಕೇರಲಿದೆ ಅಂತ ಎಕ್ಸಿಟ್ ಪೋಲ್ ಗಳು ಹೇಳಿದರೂ ಇಂಡಿ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂದರು.
ಒಂದು ವೇಳೆ ಕಾಂಗ್ರೆಸ್ ಪ್ರಧಾನಿ ಇದ್ದು, ಅವರು ವಿದೇಶ ಪ್ರವಾಸಕ್ಕೆ ತೆರಳಿದ ವೇಳೆ ಸ್ಫೋಟಗೊಂಡಿದ್ದರೆ ಆಗ ಬಿಜೆಪಿಗರ ಪ್ರತಿಕ್ರಿಯೆ ಹೇಗಿರುತ್ತಿತ್ತು ನೀವೆ ಊಹಿಸಿ ಎಂದು ಸಚಿವರು ಹೇಳಿದರು.
ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಸ್ವಲ್ಪ ಮುಂದಕ್ಕೆ :
ನವೆಂಬರ್ 19 ರಂದು ನಿಗದಿಯಾಗಿದ್ದ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ನವೆಂಬರ್ 28 ರಂದು ಆಯೋಜಿಸುವ ಉದ್ದೇಶವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

