spot_img
spot_img

ಭಾರತ ಈಗ ಜಗತ್ತಿನ ಹಿರಿಯಣ್ಣ ! – ಈರಣ್ಣ ಕಡಾಡಿ

Must Read

- Advertisement -

ಬೆಳಗಾವಿ: ಜಗತ್ತಿನ ಪ್ರಬಲ ರಾಷ್ಟ್ರಗಳನೆಲ್ಲಾ ಹಿಂದಿಕ್ಕಿ ಚಂದ್ರಯಾನ-3 ಯಶಸ್ವಿಯಾಗಿ ಭಾರತ ಜಗತ್ತಿನ ಹಿರಿಯಣ್ಣ ಎಂಬುದನ್ನು ಸಾಬೀತುಪಡಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಈವರೆಗೂ ವಿಶ್ವದ ಯಾವುದೇ ದೇಶವೂ ಭೇದಿಸದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ವಿಜ್ಞಾನಿಗಳು ವಿಕ್ರಮ್ ಲ್ಯಾಂಡರ್ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬಾಹ್ಯಾಕಾಶ ವಲಯದಲ್ಲಿ ಭಾರತದ ಕೀರ್ತಿ ಮತ್ತಷ್ಟು ಹೆಚ್ಚಳವಾಗಲು ಕಾರಣರಾಗಿದ್ದಾರೆ. ಇದು ಭಾರತೀಯರೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದರು.

ಹಾಲಿವುಡ್ ಚಲನಚಿತ್ರಗಳನ್ನು ತಯಾರಿಸಲು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುವ ಈ ದಿನಮಾನದಲ್ಲಿ ಕೇವಲ 615 ಕೋಟಿ ರೂಪಾಯಿ ಖರ್ಚು ಮಾಡುವ ಮೂಲಕ ಜಗತ್ತು ವಿಸ್ಮಯ ಪಡುವಂತೆ  ನಮ್ಮ ವಿಜ್ಞಾನಿಗಳು ಕಾರ್ಯನಿರ್ವಹಿಸಿದ್ದಾರೆ.

- Advertisement -

ಅಂತಹ ವಿಜ್ಞಾನಿಗಳಿಗೆ ಬೆನ್ನೆಲುಬಾಗಿ ಅವರನ್ನು ಹುರಿದುಂಬಿಸಿ ಈ ಕಾರ್ಯವನ್ನು ಯಶಸ್ವಿಗೊಳಿಸಲು ನೇತೃತ್ವವಹಿಸಿದ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ  ಬಾಹ್ಯಾಕಾಶ ಸಚಿವರನ್ನು ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಕಡಾಡಿ ಅಭಿನಂದಿಸುವುದಾಗಿ ತಿಳಿಸಿದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಧನಕನಕ‌ ನವರತ್ನ ನಿನ್ನೊಡವೆಯಲ್ಲಬಿಡು ನಿನ್ನೊಡವೆಯೆಂಬುವುದು ಜ್ಞಾನರತ್ನ ಈ ರತ್ನ ಧರಿಸಿದೊಡೆ ಲೋಕದಲಿ‌ ನಿನಗಿಂತ ಸಿರಿವಂತರಾರಿಲ್ಲ - ಎಮ್ಮೆತಮ್ಮ ||೧೩೧|| ಶಬ್ಧಾರ್ಥ ಧನಕನಕ = ಹಣ ಬಂಗಾರ. ನವರತ್ನ = ಒಂಬತ್ತು ಹರಳು ತಾತ್ಪರ್ಯ ಗಳಿಸಿರುವ ಹಣ‌...
- Advertisement -

More Articles Like This

- Advertisement -
close
error: Content is protected !!
Join WhatsApp Group