ಬಿಜೆಪಿಯಲ್ಲಿ ಭಾರತ ಬಲಾಢ್ಯವಾಗಿದೆ – ಪ್ರಹ್ಲಾದ ಜೋಶಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ – ಭಾರತವೀಗ ಬಲಾಢ್ಯವಾಗಿದೆ. ಪಂಡಿತ ನೆಹರೂ ಅಥವಾ ಇತ್ತೀಚಿನ ಮನಮೋಹನ ಸಿಂಗ್ ಅವರಂಥ ಸರ್ಕಾರ ಈಗ ಇಲ್ಲ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಚೀನಾ ಪಾಕಿಸ್ತಾನಗಳನ್ನು ಹಿಮ್ಮೆಟ್ಟಿಸಿದ್ದಲ್ಲದೆ ಜಾಗತಿಕವಾಗಿಯೂ ಕೂಡ ಮುಂಚೂಣಿಯಲ್ಲಿರುವ ದೇಶವಾಗಿದೆ. ಇದಕ್ಕೆಲ್ಲ ಕಾರಣ ಭಾರತೀಯ ಜನತಾ ಪಕ್ಷದ ಸರ್ಕಾರ ಕಾರಣ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಅವರು ಬೆಳಗಾವಿ ಉಪ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈಗ ಎಲ್ಲ ಕ್ಷೇತ್ರಗಳಲ್ಲಿ ಝೀರೋ ಆಗಿದೆ. ಆ ಪಕ್ಷದಲ್ಲಿ ಯಾರೂ ನಾಯಕರಾಗಿ ಇರಲು ಸಾಧ್ಯವಿಲ್ಲ. ಕೌಟುಂಬಿಕ ರಾಜಕಾರಣವಿದೆ. ಆದರೆ ಗಾಂಧಿ ಕುಟುಂಬ ಮಾತ್ರ ನಕಲಿಯಾಗಿದೆ ಎಂದು ವ್ಯಂಗ್ಯ ಮಾಡಿದರು.

ಬೆಳಗಾವಿ ಗ್ರಾಮೀಣ ಶಾಸಕ ಸಂಜಯ ಪಾಟೀಲ ಮಾತನಾಡಿ, ರೈಲ್ವೇಗಾಗಿ ೫೭೦೦೦ ಕೋಟಿ ರೂ. ಕರ್ನಾಟಕಕ್ಕೆ ತಂದ ಮೊದಲ ಸಂಸದ ಸುರೇಶ ಅಂಗಡಿಯವರು. ಇನ್ನೂ ನಮ್ಮ ರಾಜ್ಯಕ್ಕೆ ಸೌಲಭ್ಯಗಳು ಬರಬೇಕೆಂದರೆ ಮಂಗಳಾ ಅಂಗಡಿಯವರಿಗೆ ಮತ ನೀಡಬೇಕು ಎಂದರು.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಮಾತನಾಡಿ, ಮಂಗಲಾ ಅವರು ಗೋಕಾಕದ ಮಗಳು ಅವಳಿಗೆ ಆಶೀರ್ವಾದ ನೀಡುವುದು ಅರಭಾವಿ ಕ್ಷೇತ್ರದ ಜನರಾದ ನಿಮ್ಮೆಲ್ಲರ ಕರ್ತವ್ಯ ಎಂದರು.
ಇನ್ನೋರ್ವ ಮುಖಂಡ  ಲಕ್ಷ್ಮಣ ಉಪ್ಪಾರ ಮಾತನಾಡಿದರು.

- Advertisement -

ವೇದಿಕೆಯ ಮೇಲೆ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ, ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ,ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ಶಶಿಕಾಂತ ಪಾಟೀಲ, ಮಹಾದೇವ ಶೆಕ್ಕಿ, ಮಹೇಶ ಟಿಂಗಿನಕಾಯಿ, ಬಸವರಾಜ ಯಂಕಂಚಿ, ಲಕ್ಷ್ಮಣ ಉಪ್ಪಾರ, ಎಂ ಎಲ್ ಮುತ್ತೆನ್ನವರ, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ನಾಗಪ್ಪ ಶೇಖರಗೋಳ, ಪ್ರಕಾಶ ಮಾದರ ಉಪಸ್ಥಿತರಿದ್ದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!