spot_img
spot_img

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

Must Read

spot_img
- Advertisement -

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ” ಕುರಿತ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ  ಭಾಲಚಂದ್ರ ಜಾಬಶೆಟ್ಟಿಯವರು ಉಪನ್ಯಾಸ ನೀಡಿದರು.

ಉಚಿತವಾಗಿ ದೊರೆಯುವ ಸೂರ್ಯನ ಬೆಳಕಿನಿಂದ ವಿದ್ಯುತ್ ಉತ್ಪಾದಿಸುವ ಕುರಿತು ಸಮಗ್ರ ಮಾಹಿತಿ ನೀಡಿದರು.

ಕೇಂದ್ರ ಸರಕಾರವು ಘೋಷಿಸಿದ “ಸೂರ್ಯ ಘರ್” ಯೋಜನೆಯ ಕುರಿತು ವಿವರಿಸಿದ ಅವರು, ಫೋಟೋ- ವೋಲ್ಟಾಯಿಕ್ ಸೆಲ್ ಗಳನ್ನು ಉತ್ಪಾದಿಸುವ ನಿಟ್ಟಿನಲ್ಲಿ ಆಗುತ್ತಿರುವ ಸಂಶೋಧನೆ ಹಾಗೂ ಅದರಿಂದಾಗಿ ಮಾಳಿಗೆಯ ಮೇಲೆ ಅಳವಡಿಸುತ್ತಿರುವ ಸೋಲಾರ ವಿದ್ಯುತ್ ಉತ್ಪಾದನಾ ಘಟಕಗಳ ಸ್ಥಾಪನಾ ವೆಚ್ಚದಲ್ಲಿ ಗಣನೀಯ ಇಳಿಕೆಯನ್ನು ಗಮನಿಸಬಹುದು, ಜೊತೆಗೆ ಮೂರು ಕಿಲೋ ವ್ಯಾಟ್ ಉತ್ಪಾದನಾ ಘಟಕಗಳಿಗೆ ರೂ. 78000/- ಗಳ ಸಹಾಯಧನ ದೊರೆಯುವ ಕುರಿತು ವಿವರಣೆ ನೀಡಿದರು.

- Advertisement -

ಸೋಲಾರ ಪ್ಯಾನೆಲಗಳ ಗುಣಮಟ್ಟ ಸುಧಾರಣೆಗಳಿಗೆ ಜರುಗಿದ ಸಂಶೋಧನೆ ಕುರಿತು ವಿವರಣೆ ನೀಡುವ ಸಂದರ್ಭದಲ್ಲಿ, ಪ್ರಥಮದಲ್ಲಿನ ಪಾಲಿಕ್ರಷ್ಟಲೈನ್, ಮೋನೋಕ್ರಷ್ಟಲೈನ್, ಮೋನೋಕ್ರಷ್ಟಲೈನ್ ಪರ್ಕ, ಮೋನೋಕ್ರಷ್ಟಲೈನ್ ಪರ್ಕ ಹಾಫ್ ಕಟ್, ಬೈಫೇಸಿಯಲ್, ಟಾಪ್ ಕಾನ್, ಎಚ್.ಜೆ.ಟಿ. ಮುಂತಾದ ಸೌರಫಲಕಗಳ ಕುರಿತು ತಾಂತ್ರಿಕ ಮಾಹಿತಿ ನೀಡಿದರು, ವಿವಿಧ ಸೌರಫಲಕಗಳನ್ನು ಅಳವಡಿಸಿ ಉತ್ಪಾದಿಸಬಹುದಾದ ಗರಿಷ್ಟ ವಿದ್ಯುಚ್ಛಕ್ತಿ ಪ್ರಮಾಣದ ಕುರಿತು ಅಂಕಿ ಸಂಖ್ಯೆ ಗಳನ್ನಾಧರಿಸಿದ ವಿಷಯ ಮಂಡಿಸಿದರು.

ಸೌರಫಲಕಗಳಿಂದ ಗರಿಷ್ಠ ವಿದ್ಯುತ್ ಉತ್ಪಾದನೆಗಾಗಿ ಅಳವಡಿಸಬಹುದಾದ ಇತರೆ ಉಪಘಟಕಗಳಾದ ಡಿಸಿಡಿಬಿ, ಎಸಿಡಿಬಿ, ಇನ್ವರ್ಟರ್, ಲೈಟನಿಂಗ್ ಅರೆಸ್ಟರ್, ರಾಸಾಯನಿಕ ವಿದ್ಯುತ್ ವಾಹಕ ಗುಂಡಿ ಅಳವಡಿಕೆ, ಸ್ಟ್ರಕ್ಚರ್ ಗಳ ನಿರ್ಮಾಣ, ನೆಟ್ ಮೀಟರಿಂಗ್, ಹಾಗೂ ಅಳವಡಿಕೆ ಮಾಡಲು ತಗಲುವ ಖರ್ಚುವೆಚ್ಚಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಸೌರಫಲಕಗಳ ಅಳವಡಿಕೆಯ ದಿಕ್ಕು, ‘ಟಿಲ್ಟ್ ಆ್ಯಂಗಲ್’, ‘ಅಝಮತ್ ಆ್ಯಂಗಲ್’ ಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಹಾಗೆ ಮಾಡುವುದರಿಂದ ದೊರೆಯುವ ಪ್ರಯೋಜನಗಳ ಕುರಿತೂ ಸಹ ವಿವರಿಸಿದರು.

- Advertisement -

ಸೌರಫಲಕಗಳ ರಚನೆ, ವಿವಿಧ ತಂತ್ರಜ್ಞಾನಗಳ ಅಳವಡಿಕೆಯಿಂದ ಉತ್ಪಾದನಾ ವಿಧಾನಗಳ ಕುರಿತು ವಿವರಿಸಿದರು.ಕ್ಯಾಷುಟೆಕ್ ನಿರ್ಮಿತಿ ಕೇಂದ್ರದ ಪ್ರಭಾರಿ ಯೋಜನಾ ನಿರ್ದೇಶಕ, ಶ್ರೀ ವೆಂಕಟೇಶಸಿಂಗ್ ಹಝಾರೆ, ಸ್ವಾಗತಿಸಿದರು. ರಾಯಚೂರಿನ ಸರಕಾರಿ ಎಂಜಿನೀಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಅನಿಲಕುಮಾರ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕ್ಯಾಷುಟೆಕ್ ನಿರ್ಮಿತಿ ಕೇಂದ್ರದ ಪ್ರೊಡಕ್ಷನ್ ಹಾಗೂ ಆರ್ & ಡಿ ಎಂಜನೀಯರ್ ಸುರೇಂದ್ರ ಪಾಟೀಲ ವಂದನಾರ್ಪಣೆ ಮಾಡಿದರು.

ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಸರಕಾರಿ ಎಂಜನೀಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು

- Advertisement -
- Advertisement -

Latest News

ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ...
- Advertisement -

More Articles Like This

- Advertisement -
close
error: Content is protected !!
Join WhatsApp Group