spot_img
spot_img

ಬಾಲಶೇಖರ ಬಂದಿಗೆ ಅಂತಾರಾಷ್ಟ್ರೀಯ ಲಯನ್ಸ್ ಪ್ರಶಸ್ತಿ

Must Read

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಅವರು ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರ ಪ್ರಶಂಸನಾ ಪ್ರಶಸ್ತಿ ಪಡೆದುಕೊಂಡಿದ್ದಾರೆ.

2021-22ನೇ ಸಾಲಿನಲ್ಲಿ ಪರಿಸರ ಕಾಳಜಿ, ನೇತ್ರ, ದಂತ, ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ (ಬಿಪಿ) ಹಲವಾರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸಂಘಟನೆ, ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಪಾಕ್ಷಿಕ ಅನ್ನದಾಸೋಹ, ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪಶು ಆರೋಗ್ಯ ಉಚಿತ ತಪಾಸಣೆ ಶಿಬಿರಗಳ ಸಂಘಟನೆ, ಸ್ವಚ್ಛತಾ ಅಭಿಯಾನ, ಕಲಾವಿದರಿಗೆ ಸಹಾಯ, ಸಸಿಗಳ ವಿತರಣೆ ಸೇರಿದಂತೆ 80ಕ್ಕೂ ಅಧಿಕ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಮಾಡಿದ್ದನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವರು.

ಇತ್ತೀಚೆಗೆ ಗೋವಾದಲ್ಲಿ ಜರುಗಿದ ಲಯನ್ಸ್ ಕ್ಲಬ್ ಜಿಲ್ಲಾ ವಾರ್ಷಿಕ ಸಮಾವೇಶದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಎಲ್ಲ ಸದಸ್ಯರು ಬಾಲಶೇಖರ ಬಂದಿ ಅವರನ್ನು ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ಶ್ರೀ ಕೃಷ್ಣ ಜನ್ಮಾಷ್ಟಮಿ

ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈವೋಪವಸೇನ್ನರಃ ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಸೇಷತಃ ಸಾನಿಧ್ಯ ಏವ ಕರ್ತವ್ಯ ಉಪವಾಸೋ ನ ದೂರಗಃ ಎಲ್ಲ ಜಯಂತಿಗಳಲ್ಲಿಯೂ ಶ್ರೀ ಕೃಷ್ಣ...
- Advertisement -

More Articles Like This

- Advertisement -
close
error: Content is protected !!