ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ (International Mother Language Day)

Must Read

ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಬಿಂಬಿಸಲು ಮತ್ತು ಪ್ರೋತ್ಸಾಹಿಸಿ ಉಳಿಸಲು ಫೆ . 21 ನ್ನು ವಿಶ್ವ ಮಾತೃ ಭಾಷಾ ದಿನವಾಗಿ ಆಚರಿಸಲಾಗುತ್ತದೆ . 1999 ರಲ್ಲಿ ಯುನೆಸ್ಕೋ ಇದನ್ನು ಘೋಷಿಸಿತು.

ಇದರ ಮುಂದುವರಿದ ಭಾಗವಾಗಿ ವಿಶ್ವಸಂಸ್ಥೆಯು 2008 ನ್ನು “ವಿಶ್ವ ಭಾಷೆಗಳ ವರ್ಷ” ಎಂದು ಆಚರಿಸಿತು. 2000 ನೆಯ ಇಸವಿಯಿಂದ ಪ್ರತಿ ವರ್ಷ ವಿಶ್ವ ಮಾತೃಭಾಷಾ ದಿವಸವನ್ನು ಆಚರಿಸಲಾಗುತ್ತಿದೆ.

1952 ರಲ್ಲಿ ಅಂದಿನ ಪಾಕಿಸ್ತಾನದ ಭಾಗವಾಗಿದ್ದ ಇಂದಿನ ಬಾಂಗ್ಲಾದೇಶದಲ್ಲಿ ಬಾಂಗ್ಲಾ ಭಾಷೆಯನ್ನು ಅಧಿಕೃತ ಭಾಷೆಯಾಗಿ ಗುರುತಿಸಿ ಘೋಷಿಸಬೇಕು ಎಂದು ವಿದ್ಯಾರ್ಥಿಗಳು ಹೋರಾಟ ನಡೆಸಿದ್ದರು.

1952 ರ ಫೆ. 21 ರಂದು ಢಾಕಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ತೀವ್ರ ಸ್ವರೂಪ ಪಡೆಯಿತು. ಪೊಲೀಸ್ ಗೋಲಿಬಾರಿನಲ್ಲಿ ಕೆಲವು ವಿದ್ಯಾರ್ಥಿಗಳು ಅಸುನೀಗಿದರು. ಆ ನೆನಪಿಗಾಗಿ ವಿಶ್ವ ಮಾತೃಭಾಷಾ ದಿನ ಆಚರಣೆ ರೂಢಿಗೆ ಬಂತು.

ಅಪಾಯದಲ್ಲಿವೆ ಭಾಷೆಗಳು:

ಭಾರತದಲ್ಲಿ 19,500 ಕ್ಕೂ ಹೆಚ್ಚು ಆಡುಭಾಷೆಗಳಿವೆ ಇವೆಲ್ಲವನ್ನು ತಾಯ್ನುಡಿ ಎಂದು ಪರಿಗಣಿಸಬಹುದಾಗಿದೆ ಎಂದು ಇತ್ತೀಚಿನ ಜನಗಣತಿ ಆಧರಿಸಿ ರೂಪಿಸಲಾದ ವರದಿ ತಿಳಿಸಿದೆ. 2011 ರ ಜನಗಣತಿ ವರದಿ ಪ್ರಕಾರ , 19,569 ಕ್ಕೂ ಅಧಿಕ ಮಾತೃಭಾಷೆಗಳಿವೆ. ಆದರೆ ಶೇ . 96.71 ರಷ್ಟು ಜನಸಂಖ್ಯೆ 22 ಅಧಿಸೂಚಿತ ಭಾಷೆಗಳನ್ನೇ ತಮ್ಮ ಮಾತೃಭಾಷೆಯನ್ನಾಗಿ ಬಳಸುತ್ತಾರೆ. ಒಟ್ಟಾರೆ 270 ಕ್ಕೂ ಅಧಿಕ ಗುರುತು ಸಿಗದ ತಾಯ್ನುಡಿಗಳಿದ್ದು 10 ಸಾವಿರಕ್ಕೂ ಅಧಿಕ ಮಂದಿ ಮಾತನಾಡುತ್ತಿದ್ದಾರೆ.

ಆಸ್ಸಾಮಿ, ಬಂಗಾಲಿ, ಗುಜರಾತಿ, ಹಿಂದಿ, ಕನ್ನಡ ಕಾಶ್ಮೀರಿ, ಕೊಂಕಣಿ, ಮಲಯಾಳ, ಮಣಿಪುರಿ, ಮರಾಠಿ, ನೇಪಾಲಿ, ಒರಿಯಾ , ಪಂಜಾಬಿ , ಸಂಸ್ಕೃತ , ಸಿಂಧಿ , ತಮಿಳು , ತೆಲುಗು , ಉರ್ದು , ಬೋಡೋ , ಸಂಥಲಿ , ಮೈಥಿಲಿ ಹಾಗೂ ಡೊಗ್ರಿ ಭಾಷೆಗಳು ಮಾತ್ರ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸ್ಥಾನ ಪಡೆದ 22 ಭಾಷೆಗಳಾಗಿವೆ .

ಕಳೆದ ವರ್ಷದ ಶೀರ್ಷಿಕೆ:

Fostering multilingualism for inclusion in education and society” ಅಂದರೆ ಶಿಕ್ಷಣ ಮತ್ತು ಸಮಾಜದಲ್ಲಿ ಬೆರೆಸಲು ಬಹುಭಾಷಿಕತೆಯನ್ನು ಬೆಳೆಸುವುದು. ಇದರರ್ಥ , ಶಿಕ್ಷಣ ಮತ್ತು ನಿತ್ಯಜೀವನದಲ್ಲಿ ಮಾತೃಭಾಷೆಯ ಬಳಕೆಗೆ ಒತ್ತು ನೀಡುವುದು.


ಹೇಮಂತ ಚಿನ್ನು
ಕರ್ನಾಟಕ ಶಿಕ್ಷಕರ ಬಳಗ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group