spot_img
spot_img

ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

Must Read

ಮೂಡಲಗಿ: ಸಮೀಪದ ಕೌಜಲಗಿಯ ಡಾ. ಮಹಾದೇವಪ್ಪ ಮಡ್ಡೆಪ್ಪ ದಳವಾಯಿ ಪ್ರೌಢಶಾಲೆ ಮತ್ತು ಸಿಂದೂ ಮಾಧವ ಪಬ್ಲಿಕ್ ಸ್ಕೂಲ್ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಯೋಗ ದಿನ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಭಾಗಿಯಾದ ಸಂಸ್ಥೆಯ ಧರ್ಮದರ್ಶಿಗಳಾದ ಅರವಿಂದ ದಳವಾಯಿಯವರು ಉತ್ತಮ ಆರೋಗ್ಯಕ್ಕಾಗಿ ಯೋಗ ಅತ್ಯವಶ್ಯವೆಂದು ಹೇಳಿದರು. ಮುಂದುವರೆದು ಯೋಗದಿಂದ ಮನಸ್ಸಿಗೆ ಶಾಂತಿ, ನೆಮ್ಮದಿ, ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಹೀಗೆ ಸರ್ವ ರೀತಿಯಿಂದಲೂ ಆರೋಗ್ಯಯುತ ಜೀವನಶೈಲಿ ನಡೆಸಬಹುದೆಂದು ತಿಳಿಸಿದರು. ಪ್ರತಿನಿತ್ಯವೂ ಯೋಗ ಮಾಡುವುದರಿಂದ ಏಕಾಗ್ರತೆ ಲಭಿಸುತ್ತದೆ ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಎಲ್ಲ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಯೋಗ ದಿನಾಚರಣೆ ಯಶಸ್ವಿಯಾಗಿ ಆಚರಿಸಿದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!