ಜಿಲ್ಲಾ ಆಸ್ಪತ್ರೆ ಕೋವಿಡ್ ವಾರ್ಡ್‌ಗಳಿಗೆ ಸಿಸಿ ಟಿವಿ ಅಳವಡಿಕೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ಕೋವಿಡ್ ಸಂಕಷ್ಟದ ಈ ದಿನಗಳಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಹಾಗೂ ವೈದ್ಯರು ರೋಗಿಗಳ ತಪಾಸಣೆ ನಡೆಸುತ್ತಿಲ್ಲ ಎಂದು ಆರೋಪ ಕೇಳಿ ಬಂದಿದ್ದರ ಹಿನ್ನೆಲೆಯಲ್ಲಿ ಆಸ್ಪತ್ರೆಯ ವಾರ್ಡ್ ಗಳಿಗೆ ಸಿಸಿ ಟಿವಿ ಕ್ಯಾಮರಾ ಅಳವಡಿಸಿ ಪರಿಶೀಲಿಸಲಾಗುತ್ತಿದೆ.

ಎಲ್ಲವೂ ಅಧೋಗತಿಗೆ ಇಳಿದಿದೆ ಎಂಬ ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ದೂರಿನ ಬೆನ್ನಲ್ಲಿಯೇ ಬ್ರಿಮ್ಸ್ ಆಸ್ಪತ್ರೆಯ ಕೋವಿಡ್‌ನ 14 ವಾರ್ಡಗಳಲ್ಲಿ 24 ಕ್ಯಾಮರಾಗಳನ್ನು ಹಾಗೆಯೇ ಮುಖ್ಯ ಪ್ರವೇಶ ಅಳವಡಿಸಿದ್ದು ವೈದ್ಯರು ರೋಗಿಗಳನ್ನು ತಪಾಸಣೆ ನಡೆಸುತ್ತಿಲ್ಲ, ಯಾರೂ ದಿಕ್ಕಿಲ್ಲ ಎಂಬ ಆರೋಪಗಳಿಗೆ ಅಂತ್ಯ ಹೇಳುವದು ಅಲ್ಲದೆ ಜನರಿಗೆ ಧೈರ್ಯ ತುಂಬಲು , ಸಿಬ್ಬಂದಿಗೆ ಎಚ್ಚರಿಸಲು ಸಿಸಿ ಟಿವಿ ಅಳವಡಿಕೆಯ ಕ್ರಮ ಅತ್ಯಂತ ಉಪಯುಕ್ತ ಎಂದೆನ್ನಲಾಗುತ್ತಿದೆ.

ಸಾರ್ವಜನಿಕರ ದೂರುಗಳನ್ನಾಧರಿಸಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಕೋವಿಡ್ ವಾರ್ಡಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಿ ಪರಿಶೀಲಿಸುತ್ತಿರುವಂತೆ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.

- Advertisement -

ಜಿಲ್ಲಾ ಆಡಳಿತ ಈ ವ್ಯವಸ್ಥೆ ಜಾರಿಗೆ ಬಂದಿದ್ದು ವಿಶೇಷವಾದರೆ ರೋಗಿಗಳು ಎದುರಿಸುತ್ತಿರುವ ವೈದ್ಯರ ಕೊರತೆ ನೀಗಿಸುವ ಹಾಗೂ ತಮ್ಮ ಮೇಲೆ ನಿಗಾ ಇದೆ ಎಂಬ ಯೋಚನೆ ಸಿಬ್ಬಂದಿ ವರ್ಗಕ್ಕೆ ನೀಡಿದಂತಾಗಿದೆ.

ಮುಂದೆ ಹೀಗೆ ಜಿಲ್ಲಾ ಆಡಳಿತ ಕೆಲಸ ಮಾಡಿದರೆ ಜನರು ಜಿಲ್ಲಾ ಆಡಳಿತ ಮೇಲೆ ವಿಶ್ವಾಸ ಬರಬಹುದು ಎಂಬುದು ಸಾರ್ವಜನಿಕರ ಅಂಬೋಣವಾಗಿದೆ.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!