ಕಿತ್ತೂರು ಉತ್ಸವದ ನಿಮಿತ್ತ ಕವಿಗೋಷ್ಠಿಗೆ ಕವನಗಳ ಆಹ್ವಾನ

Must Read

ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರು ಉತ್ಸವದ ನಿಮಿತ್ತ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.

ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ  ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು,  ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು ಆಹ್ವಾನಿಸಲಾಗಿದೆ.

ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಸೆಪ್ಟೆಂಬರ್ 30 ರ ಒಳಗಾಗಿ ಶ್ರೀಮತಿ ಮಂಜುಳಾ ಶೆಟ್ಟರ್, ಗೌರವ ಕಾರ್ಯದರ್ಶಿಗಳು, ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು, c/o ರಾಜು ಹಕ್ಕಿ, ಮೆಳೆಪ್ಪನವರ ಚಾಳ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9945326808/ 9844491490 ಸಂಪರ್ಕಿಸಬೇಕೆಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group