ಸಿಂದಗಿ; ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆ ಸಲ್ಲಿಸಿದ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು, ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಕೆ ಪ್ರಕ್ರಿಯ ಈಗಾಗಲೆ ಪ್ರಾರಂಭವಾಗಿದ್ದು ಜು.31ರ ವರಗೆ ಶಿಕ್ಷಣ ಇಲಾಖೆಯ ವೆಬ್ ಸೈಟ್ www.schooleducation.kar.nic.in ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಇಓ ಐ.ಎಸ್.ಟಕ್ಕೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, 2023-24ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 5ನೇ ಸಪ್ಟಂಬರ್ 2023ರ ಶಿಕ್ಷಕರ ದಿನಾಚರಣೆಯಂದು ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಗಾಗಿ ಪ್ರತ್ಯೇಕವಾಗಿ ಕಿರಿಯ ಪ್ರಾಥಮಿಕ ವಿಭಾಗ ಹಿರಿಯ ಪ್ರಾಥಮಿಕ ವಿಭಾಗ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತರುವ ಸಿಂದಗಿ ತಾಲ್ಲೂಕಿನ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಬಂಧ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಸಲ್ಲಿಸುವರು ಆ.03 ರ ಸಂಜೆ 4.00 ಘಂಟೆಯ ಒಳಗೆ ತಮ್ಮ ಪ್ರಸ್ತಾವನೆಗಳನ್ನು ತ್ರಿಪ್ರತಿಯಲ್ಲಿ ಬಿಇಓ ಕಛೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಐ.ಎಫ್.ಬಾಲ್ಕಿ ಶಿಕ್ಷಣ ಸಂಯೋಜಕರು ಪ್ರಾಥಮಿಕ ಮೊ ಸಂ 9663778718 ಸಂಪರ್ಕಿಸಲು ಕೋರಿದ್ದಾರೆ.