ಅಭಿವೃದ್ಧಿಯಲ್ಲಿ ಮಕ್ಕಳನ್ನು ಬಳಸಿಕೊಳ್ಳಬೇಕು

Must Read

ಸಿಂದಗಿ; ಮಕ್ಕಳು ನಮ್ಮ ದೇಶದ ಭವಿಷ್ಯ. ಅವರ ಧ್ವನಿಯನ್ನು ಕೇಳುವುದು ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ಅವರನ್ನು ಒಳಪಡಿಸುವುದು ನಮ್ಮ ಅದ್ಯ ಕರ್ತವ್ಯ ಎಂದು ರಾಂಪುರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಬಸವರಾಜ ಪಟ್ಟಣ್ಣಶೆಟ್ಟಿ ಹೇಳಿದರು.

ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ, ಗ್ರಾಮ ಪಂಚಾಯಿತಿ ಹಾಗೂ ಸಂಗಮ ಸಂಸ್ಥೆಯ ಸಹಯೋಗದಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿ, ಈ ಸಭೆಯ ಉದ್ದೇಶ ಮಕ್ಕಳಿಗೆ ತಮ್ಮ ಅಭಿಪ್ರಾಯಗಳು ಮತ್ತು ಅಗತ್ಯಗಳನ್ನು ವ್ಯಕ್ತಪಡಿಸಲು, ಹಾಗೂ ಸ್ಥಳೀಯ ಆಡಳಿತದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಲು ವೇದಿಕೆಯನ್ನು ಒದಗಿಸುವುದು ಎಂದರು.

ಫಾ. ಸಂತೋಷ್‌ರವರು ಮಾತನಾಡಿ, “ಪ್ರತಿಯೊಂದು ಮಗುವಿಗೂ ಬದುಕು, ಅಭಿವೃದ್ಧಿ, ರಕ್ಷಣೆ ಮತ್ತು ಪಾಲ್ಗೊಳ್ಳುವ ಹಕ್ಕುಗಳಿವೆ. ಗ್ರಾಮ ಪಂಚಾಯಿತಿ ಮತ್ತು ಸಮುದಾಯವು ಮಕ್ಕಳ ಧ್ವನಿಯನ್ನು ಗೌರವಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ೧೫೦ ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಶಿಕ್ಷಣ, ಆರೋಗ್ಯ, ಮಕ್ಕಳ ರಕ್ಷಣೆ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಶಾಲೆಯ ಕಟ್ಟಡದ ದುರಸ್ತಿ, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಹಾಗೂ ಆಟದ ಮೈದಾನದ ನಿರ್ಮಾಣದ ಅಗತ್ಯವನ್ನು ಒತ್ತಿ ಹೇಳಿದರು. ಅಧಿಕಾರಿಗಳು ಮಕ್ಕಳ ಸಲಹೆಗಳನ್ನು ಗ್ರಾಮಾಭಿವೃದ್ಧಿ ಯೋಜನೆಗಳಲ್ಲಿ ಒಳಪಡಿಸುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನಾಗೇಂದ್ರ ಎಸ್. ರಜಪೂತ್, ಶ್ರೀಮತಿ ಶೋಭಾ ಪಾಟೀಲ, ಶಾಲಾ ಶಿಕ್ಷಕ/ಶಿಕ್ಷಕಿಯರು ಮತ್ತು ಫಾ. ಸಂತೋಷ್ ನಿರ್ದೇಶಕರು ಸಂಗಮ ಸಂಸ್ಥೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಕ್ಕಳೇ ವಹಿಸಿಕೊಂಡಿದ್ದು, ಆತ್ಮವಿಶ್ವಾಸದಿಂದ ಕಾರ್ಯಕ್ರಮವನ್ನು ಮುನ್ನಡೆಸಿದರು. ಸಭೆಯ ಅಂತ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲ್ಗೊಳ್ಳುವಿಕೆಗೆ ಪ್ರತಿಜ್ಞೆ ತೆಗೆದುಕೊಳ್ಳಲಾಯಿತು.

LEAVE A REPLY

Please enter your comment!
Please enter your name here

Latest News

ಮೂಡಲಗಿ : ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಹ್ಯಾಂಡ್‌ಬಾಲ್ ಕ್ರೀಡಾಕೂಟ

ಮೂಡಲಗಿ - ಕ್ರೀಡೆ ಎಂಬುದನ್ನು ಗ್ರೀಕ್ ದೇಶದಲ್ಲಿ ಮನರಂಜನೆಗಾಗಿ ಬಳಸುತ್ತಿದ್ದರು ಆದರೆ ಈಗ ಮಕ್ಕಳು ಸದೃಢವಾದ ದೇಹವನ್ನು ಮತ್ತು ಜ್ಞಾನದ ಗ್ರಹಿಕೆಯು ಹೆಚ್ಚಾಗಬೇಕಾದರೆ ಮೊದಲು ಕ್ರೀಡೆಯಲ್ಲಿ...

More Articles Like This

error: Content is protected !!
Join WhatsApp Group