spot_img
spot_img

Iranna Kadadi: ಕಬ್ಬು ಬೆಳೆಯ ಎಫ್‌ಆರ್‌ಪಿ ಹೆಚ್ಚಳ ಮತ್ತು ಯೂರಿಯಾ ರಸಗೊಬ್ಬರಕ್ಕೆ ಸಬ್ಬಿಡಿ ನೀಡಿದ ಕೇಂದ್ರದ ಕ್ರಮ ಸ್ವಾಗತಾರ್ಹ

Must Read

spot_img
- Advertisement -

ಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ದರವನ್ನು ಪ್ರತಿ ಟನ್ ಗೆ  100 ರೂ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೋದಿ ಸರ್ಕಾರ 2014-15ನೇ ಸಾಲಿನಲ್ಲಿ ಪ್ರತಿ ಟನ್ ಗೆ 2100 ರೂ. ಇದ್ದ ಎಫ್‌ಆರ್‌ಪಿ ದರವನ್ನು ಇಂದು 2023-24ನೇ ಸಾಲಿನಲ್ಲಿ ಟನ್ ಗೆ 3150 ರೂ.ಗೆ ಏರಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ 5 ಕೋಟಿ ಕಬ್ಬು ಬೆಳಗಾರರಿಗೆ ಮತ್ತು 5 ಲಕ್ಷ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.

ಯೂರಿಯಾ ರಸಗೊಬ್ಬರಕ್ಕೆ ಸಬ್ಸಿಡಿ:

ಗೊಬ್ಬರದ ಬೆಲೆಗಳು ಪ್ರತಿ ವರ್ಷ ಜಾಗತಿಕವಾಗಿ ಬಹುಪಟ್ಟು ಹೆಚ್ಚಾಗುತ್ತಿವೆ. ಆದರೆ ಕೇಂದ್ರ ಸರ್ಕಾರವು ಯೂರಿಯಾ ಸಬ್ಸಿಡಿಯನ್ನು ಹೆಚ್ಚಿಸುವ ಮೂಲಕ  ರಸಗೊಬ್ಬರ ಬೆಲೆ ಏರಿಕೆಯಿಂದ ರೈತರನ್ನು  ರಕ್ಷಿಸುತ್ತಿದೆ. ರೈತರಿಗಾಗಿ 3 ಲಕ್ಷ 70 ಸಾವಿರ ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಅನ್ನದಾತನ ಬಾಳಿನಲ್ಲಿ ಸಮಗ್ರ ಬದಲಾವಣೆ ತರುವತ್ತ ಹೆಜ್ಜೆ ಹಾಕಿದೆ ಎಂದರು.

ರಸಗೊಬ್ಬರ ಬಳಕೆ ಕಡಿಮೆ ಮಾಡಿದ ರಾಜ್ಯಗಳಿಗೆ ಕೇಂದ್ರದಿಂದ ಸಹಾಯಧನ:

ಒಂದು ರಾಜ್ಯ 10 ಲಕ್ಷ ಟನ್ ರಾಸಾಯನಿಕ ಗೊಬ್ಬರ ಉಪಯೋಗಿಸುತ್ತಿದ್ದು ಅದನ್ನು 3 ಲಕ್ಷ ಟನ್ ಗೆ ಇಳಿಸಿದರೆ ಅದರ ಸಬ್ಸಿಡಿ ಉಳಿತಾಯ ಸುಮಾರು 3000 ಕೋಟಿ ರೂ. ಆಗಲಿದೆ. ಈ ಪೈಕಿ ಶೇ 50 ರಷ್ಟು ಅಂದರೆ 1500 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಸಂಬಂಧಪಟ್ಟ ರಾಜ್ಯಕ್ಕೆ ನೀಡಲಿದೆ.

- Advertisement -

ಇದನ್ನು ಪರ್ಯಾಯ ಗೊಬ್ಬರ ಮತ್ತು ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಬಹುದಾಗಿದೆ ಎಂದರಲ್ಲದೇ ಈ ಐತಿಹಾಸಿಕ ನಿರ್ಧಾರ ಕೈಗೋಂಡ ಪ್ರಧಾನಮಂತ್ರಿ  ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ನಾಡಿನ ರೈತರ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

- Advertisement -
- Advertisement -

Latest News

ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ

ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group