ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

Must Read

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಸಲ್ಲಿಸಲಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಶುಕ್ರವಾರ ಜುಲೈ 30 ರಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿ, ರಾಜ್ಯದ ಸಂಸದರ ಜೊತೆ ನಡೆಸಿದ ಸಭೆಯ ನಂತರ ಭೇಟಿಯಾಗಿ ಗೋಕಾಕ ತಾಲೂಕು ಅತ್ಯಂತ ಜನನಿಬಿಡ ಮತ್ತು ಅತಿ ಹೆಚ್ಚು ವಾಹನ ಸಂಚಾರ ಹೊಂದಿರುವ ತಾಲೂಕು ಆಗಿದ್ದು, ಜತ್ತ ..ಜಾಂಬೋಟ ರಾಜ್ಯ ಹೆದ್ದಾರಿ-31 ರಲ್ಲಿ ಕಿ.ಮೀ 101.30 ರಲ್ಲಿ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಸಿದ ಸೇತುವೆಯು ಅತ್ಯಂತ ಪುರಾತನ ಸೇತುವೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಶಿಥಿಲಗೊಂಡಿರುತ್ತದೆ. ಸೇತುವೆಯ ಮೇಲಿನಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ವಾಹನ ಸಂಚಾರ ಹೆಚ್ಚಳವಾಗಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ಆದಷ್ಟು ಬೇಗ ಲೋಳಸೂರ ಗ್ರಾಮದ ಹತ್ತಿರ ಹೊಸ ಸೇತುವೆ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ.

ಕಳೆದ ವರ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ಸಂಬಂಧ ಮನವಿ ಸಲ್ಲಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮುಖ್ಯಮಂತ್ರಿಗಳಿಗೆ ನೆನಪಿಸಿದರು. ಈ ಮನವಿಗೆ ಮುಖ್ಯಮಂತ್ರಿಗಳು ಧನಾತ್ಮಕವಾಗಿ ಸ್ಪಂಧಿಸಿದ್ದು ಅವರ ಜನ ಸಮಾನ್ಯರ ಕಾಳಜಿ ವೈಯಕ್ತಿವಾಗಿ ನನಗೆ ಸಂತಸ ಉಂಟು ಮಾಡಿದೆ ಎಂದು ಕಡಾಡಿ ಹೇಳಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group