spot_img
spot_img

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆಗೆ ಕೇಂದ್ರಕ್ಕೆ ಕಡಾಡಿ ಪ್ರಸ್ತಾವನೆ

Must Read

ಮೂಡಲಗಿ: ಬೆಳಗಾವಿ ವೃತ್ತದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಒತ್ತಾಯಿಸಿದರು.

ಮಂಗಳವಾರ (ಮಾ 23) ರಂದು ರಾಜ್ಯಸಭೆಯಲ್ಲಿ ಸಂಸದರಾದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ ಅವರು, ಬೆಳಗಾವಿ ವೃತ್ತದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸ್ಥಾಪಿಸುವ ಕುರಿತು ಈಗಾಗಲೇ ಕಡಾಡಿ ಅವರು ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಿ ಆಧಾರದ ಮೇಲೆ ಅನುಮೋದನೆ ನೀಡಲಾಗುವುದು ಎಂದು ಸಚಿವರು ಉತ್ತರಿಸಿದರು.

ದೇಶದಲ್ಲಿ ರಕ್ತಹೀನತೆಯಿಂದ ಬಳಲುತ್ತಿರುವರಲ್ಲಿ ಶೇ 50% ಗರ್ಭಿಣಿ ಮಹಿಳೆಯರು ಇದ್ದಾರೆ. ಭಾರತವನ್ನು ಅನೀಮಿಯಾದಿಂದ ಮುಕ್ತಗೊಳಿಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ಆರೋಗ್ಯ ಮಿಷನ್ ಮೂಲಕ ಪ್ರತಿ ರಾಜ್ಯಗಳ ಸಹಯೋಗದಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು. ಕರ್ನಾಟಕ ರಾಜ್ಯ ಕಳೆದ ಮೂರು ವರ್ಷಗಳಲ್ಲಿ ಪ್ರತಿಶತ 100 ರಷ್ಟು ಅನುದಾನವನ್ನು ಬಳಸಿಕೊಂಡಿದೆ ಎಂದು ಉತ್ತರಿಸಿದರು.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!